ಬಂಟ್ವಾಳ, ಅ. 11, 2020 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ಸಿದ್ದತಾ ಸಭೆಯು ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ರಮಾನಾಥ ರೈ ಪಂಚಾಯತ್ ಚುನಾವಣೆಯನ್ನು ಅತೀ ಗಂಭೀರವಾಗಿ ಪರಿಗಣಿಸುವಂತೆ ಹಾಗೂ ಸೂಕ್ಷ್ಮತೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ತಿಳಿಸಿದರು. ಜಿಲ್ಲಾ ಉಸ್ತುವಾರಿಗಳಾದ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಅಬ್ದುಲ್ ರವೂಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಂಜುಳಾ ಮಾವೆ, ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಬಂಟ್ವಾಳ ಪುರಸಭಾ ಸದಸ್ಯರು, ಗ್ರಾಮ ಪಂಚಾಯತ್ ಚುನಾವಣೆಯ ಉಸ್ತುವಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು, ವಿವಿಧ ಮುಂಚೂಣಿ ಘಟಕದ ಅದ್ಯಕ್ಷರು ಉಪಸ್ಥಿತರಿದ್ದರು.
0 comments:
Post a Comment