ಬಂಟ್ವಾಳ, ಅ. 02, 2020 (ಕರಾವಳಿ ಟೈಮ್ಸ್) : ಕಂದಾಯ ಇಲಾಖೆ ಬಂಟ್ವಾಳ, ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಬಂಟ್ವಾಳ ತಾಲೂಕು ಕಂದಾಯ ಇಲಾಖಾ ಸಿಬ್ಬಂದಿಗಳಿಂದ ರಕ್ತದಾನ ಶಿಬಿರ ಬಿ ಸಿ ರೋಡಿನ ಮಿನಿ ವಿಧಾನಸೌಧದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಮಾತನಾಡಿ, ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ರಕ್ತದಾನದಂತಹ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿದ ತಾಲೂಕಾಡಳಿತದ ಚಿಂತನೆಗೆ ಹ್ಯಾಟ್ಸಪ್ ಎಂದರು. ಸರಕಾರಿ ಕೆಲಸದ ಜೊತೆಯಲ್ಲಿ ಸಾಮಾಜಿಕ ಬದ್ದತೆ ಪ್ರದರ್ಶಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಸಕರು ಶ್ಲಾಘಿಸಿದರು.
ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು ಮಾತನಾಡಿ ಕಂದಾಯ ಇಲಾಖೆಯ ಪ್ರತಿಯೊಬ್ಬರ ಸಹಕಾರದಿಂದ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗಿದೆ. ಮುಂದೆಯೂ ಇಂತಹ ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲು ತಾಲೂಕಿ ಕಛೇರಿ ಸಿಬ್ಬಂದಿಗಳ ಜೊತೆಗೆ ತಾಲೂಕಿನ ಜನರ ಸಹಕಾರ ಅಗತ್ಯ ಎಂದರು.
ಬುಡಾ ಆಧ್ಯಕ್ಷ ಬಿ ದೇವದಾಸ ಶೆಟ್ಟಿ, ಸೇವಾಂಜಲಿ ಪ್ರತಿಷ್ಠಾನದ ಕೃಷ್ಣಕುಮಾರ್ ಪೂಂಜಾ, ತಾಲೂಕು ವೈದ್ಯಾಧಿಕಾರಿ ಡಾ ದೀಪಾ ಪ್ರಭು, ದೇರಳಕಟ್ಟೆಯ ಡಾ ಶ್ರೀಲಕ್ಷ್ಮಿ ಮೊದಲಾದವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಶಿರಸ್ತೇದಾರ್ ರಾಜೇಶ್ ನಾಯ್ಕ್, ರವಿಶಂಕರ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಕಛೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕರು ಮೊದಲಾದವರು ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ, ವಂದಿಸಿದರು.
0 comments:
Post a Comment