ಬಳ್ಳಾರಿ ನಗರವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಲು ಸಂಸದ ದೇವೇಂದ್ರಪ್ಪ ಮನವಿ - Karavali Times ಬಳ್ಳಾರಿ ನಗರವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಲು ಸಂಸದ ದೇವೇಂದ್ರಪ್ಪ ಮನವಿ - Karavali Times

728x90

4 October 2020

ಬಳ್ಳಾರಿ ನಗರವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಲು ಸಂಸದ ದೇವೇಂದ್ರಪ್ಪ ಮನವಿ



ಬಳ್ಳಾರಿ ಅ. 04, 2020 (ಕರಾವಳಿ ಟೈಮ್ಸ್) : ಕಲ್ಯಾಣ ಕರ್ನಾಟಕದ ಪ್ರಮುಖ ಕೇಂದ್ರವಾಗಿರುವ ಬಳ್ಳಾರಿ ನಗರವನ್ನು ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಿ ಎಂದು ಬಳ್ಳಾರಿ ಸಂಸದ ವೈ ದೇವೇಂದ್ರಪ್ಪ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ. 

ಇತ್ತೀಚೆಗೆ ದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದ ಅವರು ತಮ್ಮ ಮನವಿ ಪತ್ರದಲ್ಲಿ ಬಳ್ಳಾರಿ ಹಾಗೂ ಕಲಬುರ್ಗಿ ಮಾತ್ರ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ನಗರ ಪಾಲಿಕೆಗಳಾಗಿವೆ. ಅತ್ಯಂತ ಹಳೆಯ ನಗರವಾಗಿರುವ ಬಳ್ಳಾರಿ ಆರ್ಥಿಕತೆಯ ಪ್ರಮುಖ ಕೇಂದ್ರವಾಗಿದೆ. ರಾಜ್ಯದ ಎರಡು ಜಿಲ್ಲೆಗಳು ಹಾಗೂ ಆಂದ್ರ ಪ್ರದೇಶ ರಾಜ್ಯದ ಮೂರು ಜಿಲ್ಲೆಗಳ ಮಧ್ಯೆ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. 

ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಬಳ್ಳಾರಿಯನ್ನು ಸೇರ್ಪಡೆಗೊಳಿಸಿಕೊಳ್ಳುವುದರಿಂದ ನಗರದ ಮೂಲಭೂತ ಸೌಕರ್ಯಗಳು ಹೆಚ್ಚಾಗುತ್ತವೆ. ಅಲ್ಲದೆ ಈ ಭಾಗದಲ್ಲಿ ಆರ್ಥಿಕತೆಗೆ ಪುಷ್ಠಿಯನ್ನು ನೀಡುತ್ತವೆ. ಈ ಪತ್ರದ ಜೊತೆಯಲ್ಲಿ ಬಳ್ಳಾರಿ ನಗರದ ಬಗ್ಗೆ ಸಣ್ಣ ಪುಸ್ತಿಕೆಯನ್ನು ನೀಡಿದ್ದು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಳವಡಿಸಿಕೊಳ್ಳುವುದರಿಂದ ಈ ಭಾಗದ ಭೌಗೋಳಿಕ ಹಾಗೂ ಜನ ಸಂಪನ್ಮೂಲದ ಅಭಿವೃದ್ದಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.








  • Blogger Comments
  • Facebook Comments

0 comments:

Post a Comment

Item Reviewed: ಬಳ್ಳಾರಿ ನಗರವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಲು ಸಂಸದ ದೇವೇಂದ್ರಪ್ಪ ಮನವಿ Rating: 5 Reviewed By: karavali Times
Scroll to Top