ಬೆಂಗಳೂರು, ಅ. 06, 2020 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಬೆಳಿಗ್ಗೆ ದಿವಂಗತ ಮುತ್ತಪ್ಪ ರೈ ಅವರ ಮನೆಗೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು ಅವರ ಪುತ್ರ ರಿಕ್ಕಿ ರೈ ಅವರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಡ್ರಗ್ಸ್ ಪೆಡ್ಲರ್ಸ್‍ಗಳೊಂದಿಗೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಸಿಸಿಬಿ ಅಧಿಕಾರಿಗಳಿಗೆ ದೊರೆತ ಹಿನ್ನಲೆಯಲ್ಲಿ ನ್ಯಾಯಾಲಯದ ಸರ್ಚ್ ವಾರಂಟ್‍ನೊಂದಿಗೆ ದಾಳಿ ನಡೆಸಿದ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ. ನಗರದ ರಾಮನಗರ ಬಿಡದಿಯ ಮುತ್ತಪ್ಪ ರೈ ಅವರ ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಈ ಶೋಧ ಕಾರ್ಯ ಕೈಗೊಂಡಿದ್ದಾರೆ. ಎಸಿಬಿ ವೇಣುಗೋಪಾಲ್ ನೇತೃತ್ವದ ಅದಿಕಾರಿಗಳು ಈ ದಾಳಿ ಸಂಘಟಿಸಿದ್ದಾರೆ ಎಂದು ಗೊತ್ತಾಗಿದೆ.
0 comments:
Post a Comment