ಬೆಂಗಳೂರು, ಅ. 04, 2020 (ಕರಾವಳಿ ಟೈಮ್ಸ್) : ರಾಜ್ಯ ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಸಚಿವ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಿ.ಟಿ. ರವಿ ಸಿ.ಎಂ. ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಸೋಮವಾರ ದೆಹಲಿಗೆ ಪ್ರಯಾಣ ಬೆಳಸಲಿರುವ ರವಿ ರಾಜೀನಾಮೆ ಬಗ್ಗೆ ಜೆಪಿ ನಡ್ಡಾಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಅ. 5, 6 ರಂದು ದೆಹಲಿಯಲ್ಲಿ ಪಕ್ಷದ ಸಂಘಟನಾ ಸಭೆ ನಡೆಯಲಿದೆ. ಹೀಗಾಗಿ ಸಿ.ಟಿ. ರವಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಿ.ಟಿ ರವಿ ರಾಜೀನಾಮೆ ಸ್ವೀಕಾರ ಬಗ್ಗೆ ಸೋಮವಾರವೇ ನಿರ್ಣಯ ತೆಗೆದುಕೊಳ್ಳಲಾಗುತ್ತದೆ.
ಬಿಜೆಪಿಯಲ್ಲಿ ಓರ್ವ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮವಿದೆ. ಹೀಗಾಗಿ ಪಕ್ಷದ ಹುದ್ದೆ ನೀಡಿದರೆ ಸಚಿವ ಸ್ಥಾನದಲ್ಲಿ ಮುಂದುವರಿಯುವಂತಿಲ್ಲ. ಈ ಕಾರಣಕ್ಕೆ ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
0 comments:
Post a Comment