ಬಂಟ್ವಾಳ, ಅ. 11, 2020 (ಕರಾವಳಿ ಟೈಮ್ಸ್) : ರಾಜ್ಯ ಬಿಜೆಪಿ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ ರಮಾನಾಥ ರೈ ನಿರ್ದೇಶನದಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ 39 ಗ್ರಾಮ ಪಂಚಾಯತ್ ಕಛೇರಿ ಮುಂಭಾಗ ಅ. 13 ರಂದು ಮಂಗಳವಾರ ಬೆಳಿಗ್ಗೆ ಗಂಟೆ 10.30 ಕ್ಕೆ ಏಕಕಾಲದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಾಮೂಹಿಕ ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸರಕಾರದ ಸವಲತ್ತುಗಳಿಂದ ವಂಚಿತರಾದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸುವಂತೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment