ಬೆಂಗಳೂರು, ಅಕ್ಟೋಬರ್ 2, 2020 (ಕರಾವಳಿ ಟೈಮ್ಸ್) : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕ್ರೂರವಾಗಿ ಹತ್ಯೆ ಮಾಡಿದ ಆರೋಪಿಗಳಿಗೆ ಕೂಡಲೇ ಶಿಕ್ಷಿಸಿ ಹಾಗೂ ಈ ಪ್ರಕರಣದಲ್ಲಿ ತಾರತಮ್ಯ ಮತ್ತು ನಿರ್ಲಕ್ಷತೆ ತೋರಿಸಿದ ಅಧಿಕಾರಿ ಹಾಗೂ ರಾಜಕಾರಣಿಗಳ ವಿರುದ್ದ ಕಾನೂನು ಕ್ರಮ ಜರುಗಿಸಿ ಸರಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ ಸಿ.ಎಸ್. ರಘು ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ನಂತರ ಗಂಭೀರವಾಗಿ ಗಾಯಗೊಳಿಸಲಾಗಿತ್ತು. ದೆಹಲಿಯ ಆಸ್ಪತ್ರೆಗೆ ದಾಖಲಾಗಿ 14 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ನಂತರ ಹೆಣ್ಣು ಮಗಳ ಮೃತದೇಹವನ್ನು ಕುಟುಂಬಕ್ಕೆ ಒಪ್ಪಿಸದೆ ಆಕೆಯ ಅಂತಿಮ ದರ್ಶನಕ್ಕೂ ಸಹ ಸರಕಾರ ಅವಕಾಶ ನೀಡದೆ ರಾತ್ರೋರಾತ್ರಿ ಪೆÇಲೀಸ್ ಬಂದೋಬಸ್ತಿನಲ್ಲಿ ಮೃತದೇಹವನ್ನು ಸುಟ್ಟು ಹಾಕಿರುತ್ತಾರೆ. ಇದು ಯುವತಿಯ ಸಾವಿನ ಘೋರಕೃತ್ಯಕ್ಕೆ ಕಾರಣರಾದ ಆರೋಪಿಗಳನ್ನು ರಕ್ಷಿಸುವ ಹೀನ ಕೃತ್ಯವಾಗಿದೆ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾದ ಕೇಂದ್ರ ಹಾಗೂ ರಾಜ್ಯ ಸರಕಾರ, ಸರ್ವಾಧಿಕಾರಿ ದೋರಣೆ ತೋರುತ್ತಿರುವ ಉತ್ತರಪ್ರದೇಶದ ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
0 comments:
Post a Comment