ಬಂಟ್ವಾಳ, ಅ. 07, 2020 (ಕರಾವಳಿ ಟೈಮ್ಸ್) : ಇಲ್ಲಿನ ತಾಲೂಕು ಪಂಚಾಯತ್ ಮಾಜಿ ಸದಸ್ಯ, ಅಮ್ಟಾಡಿ ನಿವಾಸಿ, ಕಾಂಗ್ರೆಸ್ ಮುಖಂಡ ಎಪ್ರಿಯಂ ಸಿಕ್ವೇರಾ ಅಲ್ಪ ಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾದರು.
ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದ ಇವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ, ಬಂಟ್ವಾಳ ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಮೊದಲಾದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
0 comments:
Post a Comment