ಹತ್ರಾಸ್ ಪ್ರಕರಣದಲ್ಲಿ ಎಸ್ಪಿ, ಡಿಎಸ್‍ಪಿ ಹಾಗೂ ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿ ಯುಪಿ ಸಿಎಂ ಆದೇಶ
ಲಖನೌ, ಅ. 03, 2020, (ಕರಾವಳಿ ಟೈಮ್ಸ್) : ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಡೆದ ಮಹತ್ವದ ಬೆಳವಣಿಗೆಯಲ್ಲಿ ಪ್ರಾಥಮಿಕ ತನಿಖಾ ವರದಿಯ ಆಧಾರದದಲ್ಲಿ ಪೆÇಲೀಸ್ ವರಿಷ್ಠಾಧಿಕಾರಿ, ಉಪ ಪೆÇಲೀಸ್ ವರಿಷ್ಠಾಧಿಕಾರಿ, ಇನ್ಸ್‍ಪೆಕ್ಟರ್ ಹಾಗೂ ಇತರ ಕೆಲ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ £ೀಡಿದ್ದಾರೆ ಎಂದು ಮುಖ್ಯಮಂತ್ರಿ ಕಛೇರಿ ಪ್ರಕಟಣೆ ತಿಳಿಸಿದೆ. ಎಸ್‍ಪಿ ಮತ್ತು ಡಿಎಸ್‍ಪಿಯ ನಾರ್ಕೊ ಪಾಲಿಗ್ರಾಫ್ ಪರೀಕ್ಷೆಗಳನ್ನು ಕೂಡಾ ನಡೆಸಲಾಗುವುದು ಎಂದು ಸಿಎಂಒ ತಿಳಿಸಿದೆ.
ಹತ್ರಾಸ್‍ನಲ್ಲಿ ನಡೆದ 19 ವರ್ಷದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದ ಪರಿಣಾಮ ಈ ಬೆಳವಣಿಗೆ ನಡೆದಿದೆ. ದೆಹಲಿಯ ಜಂತರ್ ಮಂತರ್‍ನಲ್ಲಿ ಕೂಡಾ ದೆಹಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಹಲವಾರು ಮುಖಂಡ ಭಾಗವಹಿಸುವಿಕೆಯಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಕೇಜ್ರಿವಾಲ್, ಘಟನೆಯ ಬಗ್ಗೆ ಯಾವುದೇ ರಾಜಕೀಯ ಸಲ್ಲದು. ದೇಶದಲ್ಲಿ ಯಾವುದೇ ಅತ್ಯಾಚಾರದಂತಹ ಘಟನೆಗಳು ನಡೆಯಬಾರದು ಎಂದರು. ಸೆಪ್ಟೆಂಬರ್ 14 ರಂದು ಹತ್ರಾಸ್ ಹಳ್ಳಿಯಲ್ಲಿರುವ ಹೊಲದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.
0 comments:
Post a Comment