ಬೆಂಗಳೂರು, ಅ. 19, 2020 (ಕರಾವಳಿ ಟೈಮ್ಸ್) : ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅಕ್ಟೋಬರ್ 19 ರಿಂದ 23 ರವರೆಗೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿರುವ ಅವರು ಈ ಹಿನ್ನೆಲೆಯಲ್ಲಿ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 20 ರಿಂದ 23ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 19 ರಿಂದ 23 ರವರೆಗೆ ಮಳೆಯಾಗುವ ನಿರೀಕ್ಷೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ, ಗದಗ ಜಿಲ್ಲೆಗಳಲ್ಲೂ ಅಕ್ಟೋಬರ್ 19 ರಿಂದ 22 ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ಸೋಮವಾರ ಹಾಗೂ ಮಂಗಳವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಅಕ್ಟೋಬರ್ 21, 22 ಹಾಗೂ 23ರಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ ಎಂದು ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
0 comments:
Post a Comment