ನವದೆಹಲಿ, ಅ. 08, 2020 (ಕರಾವಳಿ ಟೈಮ್ಸ್) : ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ (74) ಗುರುವಾರ ಸಂಜೆ ನಿಧನರಾಗಿದ್ದಾರೆ. ಸೆಪ್ಟೆಂಬರ್ ಕೊನೆಗೆ ಕೇಂದ್ರ ಸರಕಾರದ ರೈಲ್ವೆ ರಾಜ್ಯ ಖಾತೆ ಸಚಿವರಾಗಿದ್ದ ಸುರೇಶ್ ಅಂಗಡಿ ಅವರು ಮೃತಪಟ್ಟಿದ್ದರು. ಇದೀಗ ಮತ್ತೋರ್ವ ಸಚಿವ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಪಾಸ್ವಾನ್ ಕೆಲ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪಾಸ್ವಾನ್ ಪುತ್ರ ಚಿರಾಗ್ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಲೋಕ್ ಜನಶಕ್ತಿ ಪಾರ್ಟಿ (ಎಲ್‍ಜೆಪಿ) ಮುಖ್ಯಸ್ಥ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ತನ್ನ ಪಕ್ಷವನ್ನು ಎನ್‍ಡಿಎ ಮೈತ್ರಿಕೂಟದ ಭಾಗ ಮಾಡಿಕೊಂಡು ಕೇಂದ್ರದಲ್ಲಿ ಮಂತ್ರಿಯಾಗಿದ್ದರು.
0 comments:
Post a Comment