ಸುಳ್ಯ, ಅ. 08, 2020 (ಕರಾವಳಿ ಟೈಮ್ಸ್) : ಕೊಲೆ ಪ್ರಕರಣವೊಂದರ ಆರೋಪಿ ಸಂಪತ್ ಮೇಲೆ ಅಪರಿಚಿತ ವ್ಯಕ್ತಿಗಳು ಗುರುವಾರ ಬೆಳಿಗ್ಗೆ ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಸುಳ್ಯ ಸಮೀಪದ ಶಾಂತಿನಗರದಲ್ಲಿ ನಡೆದಿದೆ. ಘಟನೆಯಿಂದ ತೀವ್ರವಾಗಿ ಗಾಯಗೊಂಡ ಸಂಪತ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸಂಪತ್ ಕುಮಾರ್ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಎಂಬವರ ಕೊಲೆ ಆರೋಪಿಯಾಗಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ. ಬಳಿಕ ಜಾಮೀನು ಬಿಡುಗಡೆ ಹೊಂದಿದ್ದ. ಗುರುವಾರ ಬೆಳಿಗ್ಗೆ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ತಂಡ ಈ ದಾಳಿ ನಡೆಸಿದ್ದು, ಪರಿಚಯ ಗೊತ್ತಾಗಿಲ್ಲ. ಕೊಲೆಗೆ ನಿಖರ ಕಾರಣವೂ ಗೊತ್ತಾಗಿಲ್ಲ. ಘಟನಾ ಸ್ಥಳಕ್ಕೆ ಸುಳ್ಯ ಪೆÇಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
0 comments:
Post a Comment