ವಿಟ್ಲ, ಅ. 20, 2020 (ಕರಾವಳಿ ಟೈಮ್ಸ್) : ವಿಟ್ಲ ಪೇಟೆಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿಯ ಕೆಜಿ ಟವರ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಉಂಟಾದ ಬೆಂಕಿ ಅವಘಡದಿಂದಾಗಿ ಎರಡು ಅಂಗಡಿಗಳು ಸುಟ್ಟು ಭಸ್ಮವಾಗಿದೆ. ಸಂಕೀರ್ಣದ ಎಂಪಿ ಹಾರ್ಡ್ ವೇರ್ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸಮೀಪದ ಬೇಕರಿಗೂ ಅದು ವ್ಯಾಪಿಸಿದ ಪರಿಣಾಮ ಎರಡೂ ಅಂಗಡಿಗಳು ಸುಟ್ಟು ಕರಕಲಾಗಿದೆ.
ತಕ್ಷಣ ಸ್ಥಳೀಯರಿಂದ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರಾದರೂ ಅದಾಗಲೇ ಅಂಗಡಿಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿದೆ. ಬೆಂಕಿ ಅವಘಡಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.
0 comments:
Post a Comment