ಬಂಟ್ವಾಳ, ಅಕ್ಟೋಬರ್ 1, 2020 (ಕರಾವಳಿ ಟೈಮ್ಸ್) : ರಾಜ್ಯದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕಛೇರಿಯ ಮೇಲೆ ಸಿಸಿಬಿ ಪೊಲೀಸರ ತಂಡ ಅಪ್ರಜಾಪ್ರಭುತ್ವ ರೀತಿಯಲ್ಲಿ ದಾಳಿ ವಾಹಿನಿಯ ನೇರ ಪ್ರಸಾರ ಸ್ಥಗಿತಗೊಳಿಸಿದ ಕ್ರಮವನ್ನು ಖಂಡಿಸಿ ಕರ್ನಾಟಕ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಈ ಬಗ್ಗೆ ಸೂಕ್ತ ಕ್ರಮ ಜರುಗಿಸಿ ಮಾಧ್ಯಮ ಮೇಲಾಗುತ್ತಿರುವ ದೌರ್ಜನ್ಯಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಬಂಟ್ವಾಳ ತಾಲೂಕು ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಸಂಘದ ಪದಾಧಿಕಾರಿಗಳಾದ ಲತೀಫ್ ನೇರಳಕಟ್ಟೆ, ಪಿ ಎಂ ಅಶ್ರಫ್ ಪಾಣೆಮಂಗಳೂರು, ಸತೀಶ್ ಕುಮಾರ್ ಕಾರ್ತಿಕ್, ಯು ಮಸ್ತಫಾ, ಬಾಲಕೃಷ್ಣ ಮೊದಲಾದವರು ಇದ್ದರು.
0 comments:
Post a Comment