ಬಂಟ್ವಾಳ, ಅಕ್ಟೋಬರ್ 3, 2020 (ಕರಾವಳಿ ಟೈಮ್ಸ್) : ಮಾಣಿ ವಲಯ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಮಾಣಿ ನಾರಾಯಣ ಗುರು ಮಂದಿರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾಣಿ ಗ್ರಾಮದ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ಕಾಂಗ್ರೆಸ್ಸಿನ ವಿಶಿಷ್ಟ ಕಾರ್ಯಕ್ರಮ ನಮ್ಮೂರ ಹಮ್ಮೆ ಯೋಜನೆಯಡಿ ಗೌರವಿಸಲಾಯಿತು.
ಮಾಜಿ ಸಚಿವ ಬಿ ರಮಾನಾಥ ರೈ ಸಭಾಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯರಾದ ಮಂಜುಳಾ ಮಾಧವ ಮಾವೆ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ. ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಆಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ತಾ.ಪಂ. ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಮಾಜಿ ಸದಸ್ಯೆ ಐಡಾ ಸುರೇಶ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ವಿದ್ಯಾರ್ಥಿ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಾಬೆ, ತಾಲೂಕು ಅಧ್ಯಕ್ಷ ವಿನಯ್, ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಾದ ಅಬ್ದುಲ್ ಅಝೀಝ್, ನಿರಂಜನ್ ರೈ, ಅಬ್ದುಲ್ ರಝಾಕ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment