ಬಂಟ್ವಾಳ, ನ. 10, 2020 (ಕರಾವಳಿ ಟೈಮ್ಸ್) : ಶಾಸಕನಾಗಿದ್ದ ಅವಧಿಯಲ್ಲಿ ಕೈಕಂಬ ಅಟೋ ರಿಕ್ಷಾ ಚಾಲಕ-ಮಾಲಕರೊಂದಿಗೆ ನೀಡಿದ ಭರವಸೆಯಂತೆ ಅಧಿಕಾರ ಕಳೆದುಕೊಂಡರೂ ಬೇರೆ ಕಡೆಯಿಂದ ಅನುದಾನ ತರಿಸಿ ಜನರ ಬೇಡಿಕೆ ಈಡೇರಿಸಿದ್ದೇನೆ. ಆ ಮೂಲಕ ಜನರ ಮನಸ್ಸಿನ ಇಚ್ಛೆ ಪೂರೈಸಿದ ತೃಪ್ತಿ ಇದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದರು.
ಬಿ ಸಿ ರೋಡು ಸಮೀಪದ ಕೈಕಂಬ ಪೊಳಲಿ ದ್ವಾರದ ಬಳಿ ವಿಧಾನ ಪರಿಷತ್ ಸದಸ್ಯ ಯು ಬಿ ವೆಂಕಟೇಶ್ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ನಿರ್ಮಾಣಗೊಂಡ ಅಟೋ ರಿಕ್ಷಾ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಅವರು ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಅತೀ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಶಾಸಕನಾಗಿದ್ದ ಹಾಗೂ ಸಚಿವನಾಗಿದ್ದ ಅವಧಿಯಲ್ಲಿ ಮಾಡಿರುವುದಾಗಿ ತಿಳಿಸಿದರು.
ಇದೇ ವೇಳೆ ಅಟೋ ರಿಕ್ಷಾ ಚಾಲಕ-ಮಾಲಕ ಸಂಘದ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಉಪಾಧ್ಯಕ್ಷೆ ಜೆಸಿಂತಾ ಡಿ’ಸೋಜ, ಜಿ ಪಂ ಸದದ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ ಪದ್ಮಶೇಖರ್ ಜೈನ್, ಎಂ ಎಸ್ ಮುಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪುರಸಭಾ ಸದಸ್ಯರಾದ ಗಾಯತ್ರಿ ಪ್ರಕಾಶ್, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಲುಕ್ಮಾನ್ ಬಿ ಸಿ ರೋಡು, ಹಸೈನಾರ್ ತಾಳಿಪಡ್ಪು, ಮಾಜಿ ಸದಸ್ಯ ಸದಾಶಿವ ಬಂಗೇರ, ಮೆಸ್ಕಾಂ ಸಲಹಾ ಸಮಿತಿ ಮಾಜಿ ಸದಸ್ಯ ವೆಂಕಪ್ಪ ಪೂಜಾರಿ, ಪ್ರಮುಖರಾದ ಕೆ ಮಾಯಿಲಪ್ಪ ಸಾಲ್ಯಾನ್, ಮುಹಮ್ಮದ್ ನಂದಾವರ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment