ಬೆಂಗಳೂರು, ನ. 13, 2020 (ಕರಾವಳಿ ಟೈಮ್ಸ್) : ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಮೆಡಿಕಲ್ ಕಾಲೇಜು ಆರಂಭ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಕೊರೋನಾ ಹಾಗೂ ಲಾಕ್‍ಡೌನ್ ಕಾರಣದಿಂದ ಮುಚ್ಚಲ್ಪಟ್ಟಿರುವ ರಾಜ್ಯದ ವೈದ್ಯಕೀಯ ಕಾಲೇಜುಗಳು ಮತ್ತೆ ಆರಂಭವಾಗಲಿದೆ ಎಂದು ತಿಳಿಸಿರುವ ಸಚಿವ ಕೆ ಸುಧಾಕರ್ ಮೆಡಿಕಲ್, ಡೆಂಟಲ್, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಹಾಗೂ ಫಾರ್ಮಸಿ ಕಾಲೇಜುಗಳು ಪ್ರಾರಂಭ ಮಾಡುತ್ತೇವೆ ಎಂದಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1 ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದು ಸಚಿವರು ಮನವಿ ಮಾಡಿದ್ದಾರೆ.
ನಿತ್ಯ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುವುದು ಕಡ್ಡಾಯ, ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ವಿದ್ಯಾರ್ಥಿಗಳಿಗೆ ಸ್ಯಾನಿಟೈಸ್ ವ್ಯವಸ್ಥೆ ಮಾಡಬೇಕು, ತರಗತಿ ಮುಗಿದ ಬಳಿಕ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು, ಪ್ರತಿ ಕ್ಯಾಂಪಸ್‍ಗಳಲ್ಲಿ ಆರೋಗ್ಯ ಸಹಾಯವಾಣಿ ಪ್ರಾರಂಭಿಸಬೇಕು, ಬೋಧಕ-ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್, ಗ್ಲೌಸ್ ಧರಿಸಬೇಕು, ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರದ ಬಗ್ಗೆ ಅಗತ್ಯ ಜಾಗೃತಿ ಮೂಡಿಸಬೇಕು, ಕನಿಷ್ಠ ಸಾಮಾಜಿಕ ಅಂತರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಬೇಕು, ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ಶುಚಿತ್ವ ಕಾಪಾಡಬೇಕು, ವಾಹನ ವ್ಯವಸ್ಥೆ ಇರುವ ಕಾಲೇಜುಗಳು ನಿತ್ಯ ವಾಹನಗಳನ್ನು ಸ್ಯಾನಿಟೈಸ್ ಮಾಡಬೇಕು, ಶೈಕ್ಷಣಿಕ ವರ್ಷ ತಡವಾಗಿರುವುದರಿಂದ ಶನಿವಾರ ಪೂರ್ತಿ ತರಗತಿ, ರಜೆಗಳಿಗೆ ಬ್ರೇಕ್ ಹಾಕಲು ನಿರ್ಧಾರ, ಶನಿವಾರ-ಭಾನುವಾರ ಆನ್‍ಲೈನ್ ತರಗತಿಗೆ ಹೆಚ್ಚು ಒತ್ತು ನೀಡುವುದು, ಶಿಫ್ಟ್ ಪ್ರಕಾರ ತರಗತಿ ನಡೆಸಲು ನಿರ್ಧಾರ, ಒಂದು ತರಗತಿಯಲ್ಲಿ 30 ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಮಾಡಲು ಅವಕಾಶ, ಮಾರ್ಗಸೂಚಿ ಅನುಷ್ಠಾನಕ್ಕೆ ಪ್ರಾಂಶುಪಾಲರ ನೇತೃತ್ವದಲ್ಲಿ ಟಾಸ್ಕ್ ಫೆÇೀರ್ಸ್ ರಚನೆ ಮಾಡುವುದು ಇವೇ ಮೊದಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾಲೇಜು ಪ್ರಾರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
0 comments:
Post a Comment