ಮಂಗಳೂರು, ನ. 14, 2020 (ಕರಾವಳಿ ಟೈಮ್ಸ್) : ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ನವೆಂಬರ್ 18 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು-ಬಲ್ಮಠದ ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ನಡೆಯಲಿದೆ. ಅದೇ ದಿನ ಮಧ್ಯಾಹ್ನ 3 ಗಂಟೆಗೆ ಪಿಂಚಣಿದಾರರ ಅದಾಲತ್ ಕೂಡ ನಡೆಯಲಿದೆ.
ಈ ಅದಾಲತ್‍ನಲ್ಲಿ ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ರೀತಿಯ ಸಾರ್ವಜನಿಕ ಕುಂದು-ಕೊರತೆಗಳನ್ನು, ತಕರಾರುಗಳನ್ನು ಪರಿಶೀಲಿಸಲಾಗುವುದು. ಹಾಗೆಯೇ ಪಿಂಚಣಿದಾರರ ಅದಾಲತ್ತಿನಲ್ಲಿ ಪಿಂಚಣಿಗೆ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಲಾಗುವುದು.
ಸಾರ್ವಜನಿಕರು ಇದಕ್ಕೆ ಸಂಬಂಧಪಟ್ಟ ದೂರುಗಳನ್ನು ಪತ್ರ ಮುಖೇನ “ಅಂಚೆ ಅದಾಲತ್/ ಪಿಂಚಣಿದಾರರ ಅದಾಲತ್” ತಲೆಬರಹದಡಿ ನವೆಂಬರ್ 17ರೊಳಗೆ “ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಬಲ್ಮಠ, ಮಂಗಳೂರು-575002” ವಿಳಾಸಕ್ಕೆ ಅಥವಾ ದೂರುಗಳನ್ನು ವಾಟ್ಸಾಪ್ ಸಂಖ್ಯೆ 9448291072 ಗೆ ಕಳುಹಿಸಬಹುದು. ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಮಾತ್ರ ಕಳುಹಿಸುವಂತೆ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗದ ಕಛೇರಿಯ ಪ್ರಕಟಣೆ ತಿಳಿಸಿದೆ.
0 comments:
Post a Comment