ಚೆನ್ನೈ, ನ. 08, 2020 (ಕರಾವಳಿ ಟೈಮ್ಸ್) : ಕೇಂದ್ರ ಸರಕಾರದ ನೀತಿಗಳಿಂದ ಬೇಸತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ನೊಂದುಕೊಂಡು ಐಎಎಸ್ ಸೇವೆಗೆ ರಾಜೀನಾಮೆ ನೀಡಿ ಹೋರಾಟಕ್ಕೆ ಧುಮುಕಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಶೀಘ್ರವೇ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ (ನ 9) ಬೆಳಿಗ್ಗೆ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2019 ರ ಸೆ. 6 ರಂದು ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಂತರ ಸೆಂಥಿಲ್ ಸಿಎಎ, ಎನ್ ಆರ್ ಸಿ ವಿರುದ್ಧ ಪ್ರತಿಭಟನೆಯಲ್ಲಿ ಸಕ್ರಿಯವಾಗಿದ್ದರು. ತಮಿಳುನಾಡಿನವರಾದ ಸೆಂಥಿಲ್ ಇದೀಗ ಚೆನ್ನೈನಲ್ಲಿ ವಾಸವಾಗಿದ್ದು, ಅಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
0 comments:
Post a Comment