ಬಂಟ್ವಾಳ, ಡಿ. 12, 2020 (ಕರಾವಳಿ ಟೈಮ್ಸ್) : ತಾಲೂಕಿನ ಫರಂಗಿಪೇಟೆಯಲ್ಲಿ ಗುರುವಾರ ಸಂಜೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಟ್ಲ ನಿವಾಸಿ ಶಂಕರನಾರಾಯಣ ಭಟ್ (55) ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಭಟ್ ಅವರು ಗುರುವಾರ ಸಂಜೆ ಮಂಗಳೂರಿನಿಂದ ಬೈಕಿನಲ್ಲಿ ವಿಟ್ಲಕ್ಕೆ ಬರುತ್ತಿದ್ದ ವೇಳೆ ಫರಂಗಿಪೇಟೆ ಮೀನು ಮಾರ್ಕೆಟ್ ಬಳಿ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಯಿತಾದರೂ ಫಲಕಾರಿಯಾಗದೆ ಶುಕ್ರವಾರ ಅವರು ಮೃತಪಟ್ಟಿದ್ದಾರೆ. ವಿಟ್ಲದಲ್ಲಿ ಪ್ರಸಿದ್ದ ಬಾಣಸಿಗರಾಗಿದ್ದ ಮೃತರು ಪತ್ನಿ, ಪುತ್ರ ಹಾಗೂ ಪುತ್ರಿ ಸಹಿತ ಬಂಧು-ಬಳಗವನ್ನು ಅಗಲಿದ್ದಾರೆ.
0 comments:
Post a Comment