ಬಂಟ್ವಾಳ, ಡಿ. 02, 2020 (ಕರಾವಳಿ ಟೈಮ್ಸ್) : ತಾಲೂಕಿನ ಬಡಗಕಜೆಕಾರು ಗ್ರಾಮದ ಕೊಂಬಿನಡ್ಕ ಮಸೀದಿ ಬಳಿ ಮಂಗಳವಾರ ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿಯಾದ ಪರಿಣಾಮ ಬೈಕ್ ಸಹಸವಾರಿಣಿ ಕಡಬ ನಿವಾಸಿ ಕ್ಲಾರಮ್ಮ (60) ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಅನುಷಾ ಎಂಬವರು ಕ್ಲಾರಮ್ಮ ಅವರನ್ನು ದ್ವಿಚಕ್ರ ವಾಹನದಲ್ಲಿ ಕುಳ್ಳಿರಿಸಿಕೊಂಡು ತೆರಳುತ್ತಿದ್ದ ವೇಳೆ ಪಾಂಡವರಕಲ್ಲು ಕಡೆಯಿಂದ ಮಡಂತ್ಯಾರು ಕಡೆಗೆ ಧಾವಿಸಿ ಬಂದ ಪಿಕಪ್ ವಾಹನ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಮೋಟಾರ್ ಸೈಕಲನ್ನು ರಸ್ತೆಯ ತೀರಾ ಎಡ ಬದಿ ಅಂಚಿಗೆ ಸವಾರಿ ಮಾಡಿಕೊಂಡು ಹೋಗಿದ್ದರಿಂದ ಮೋಟಾರ್ ಸೈಕಲ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟ ಕ್ಲಾರಮ್ಮ ಅವರ ತಲೆಗೆ ಗಂಭೀರ ಏಟು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕ್ಲಾರಮ್ಮ ಅವರು ಹೆಲ್ಮೆಟ್ ಧರಿಸದೆ ಇದ್ದುದರಿಂದ ತಲೆಗೆ ತೀವ್ರ ಸ್ವರೂಪದ ರಕ್ತ ಗಾಯವುಂಟಾಗಿ ಈ ಸಾವು ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೆÇಲೀಸ್ ಠಾಣೆಯಲ್ಲಿ ಕಲಂ 279, 304(ಎ) ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment