ಬಂಟ್ವಾಳ, ಡಿ. 04, 2020 (ಕರಾವಳಿ ಟೈಮ್ಸ್) : ಇಲ್ಲಿನ ಕಂದಾಯ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ನ್ಯಾಯವಂಚಿತವಾಗಿರುವ ಕಡತಗಳಿಗೆ ನ್ಯಾಯ ಸಿಗದಿರುವುದು ಸಹಿತ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಡಿ 7 ರಂದು ಬಿ ಸಿ ರೋಡಿನ ಮಿನಿ ವಿಧಾನಸೌಧ ಮುಂಭಾಗ ಏಕದಿನ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಜಿಲ್ಲಾ ದಲಿತ್ ಸೇವಾ ಸಮಿತಿ ಅಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ.
ಸರಕಾರಿ ಜಮೀನು ಹಾಗೂ ನಿವೃತ್ತ ಸೈನಿಕರಿಗೆ ಮೀಸಲಿಟ್ಟ ಜಮೀನು ತೆರವುಗೊಳಿಸಲು ವಿಳಂಬ ಧೋರಣೆ, ಪಂಚಾಯತಿಗೆ ಸಂಬಂಧಿಸಿ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸುವವರ ಮೇಲೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದು, ತಾಲೂಕು ಕಛೇರಿಯಲ್ಲಿ ಕೆಲ ಸಿಬ್ಬಂದಿಗಳು ಉದ್ದೇಶಪೂರ್ವಕ ಎಂಬಂತೆ ಕಡತ ಕಾಣೆಯಾಗಿಸುವುದು ಸಹಿತ ಹಲವು ಬೇಡಿಕೆಗಳನ್ನು ಮುಂದಿಟ್ಟು ಈ ಉಪವಾಸ ನಡೆಸಲಾಗುವುತ್ತಿದೆ ಎಂದವರು ತಿಳಿಸಿದ್ದಾರೆ.
0 comments:
Post a Comment