ಬಂಟ್ವಾಳ, ಡಿ. 28, 2020 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಸಿ ರೋಡು ಪೇಟೆಯ ಸರಕಾರಿ ನೌಕರರ ಭವನದ ಬಳಿ ಸುಮಾರು 40 ರಿಂದ 45 ವರ್ಷದ ಅಪರಿಚಿತ ಗಂಡಸಿನ ಮೃತದೇಹ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ.
ಯಾರು ಎಲ್ಲಿಯವರು, ಯಾವ ರೀತಿ ಸಾವು ಸಂಭವಿಸಿದೆ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ವಾರೀಸುದಾರರಿದ್ದಲ್ಲಿ ಬಂಟ್ವಾಳ ನಗರ ಪೆÇಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment