ಬಂಟ್ವಾಳ, ಡಿ 18, 2020 (ಕರಾವಳಿ ಟೈಮ್ಸ್) : ತಾಲೂಕಿನ 57 ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್ 22 ರಂದು ಮಂಗಳವಾರ ಚುನಾವಣೆ ಹಾಗೂ ಡಿಸೆಂಬರ್ 30 ರಂದು ಮತ ಎಣಿಕೆ ಕಾರ್ಯಗಳು ನಡೆಯಲಿರುವ ಹಿನ್ನಲೆಯಲ್ಲಿ ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿರುವ ಮಸ್ಟರಿಂಗ್ ಹಾಗೂ ಡಿ ಮಸ್ಟರಿಂಗ್ ಕೇಂದ್ರ ಹಾಗೂ ಭದ್ರತಾ ಕೊಠಡಿಗಳಿಗೆ ಚುನಾವಣಾ ವೀಕ್ಷಕ ಬೆಂಗಳೂರು ಬಿಡಿಎ ಎಸ್ಟೇಟ್ ಆಫೀಸರ್ ಶಾಂತರಾಜು ವೈ ಬಿ ಅವರು ಶುಕ್ರವಾರ ಬೇಟಿ ನೀಡಿ ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಂ ನರ್ಮಾಣ ಹಾಗೂ ಭದ್ರತೆ ಸೇರಿದಂತೆ ಕೈಗೊಳ್ಳಲಾಗಿರುವ ಎಲ್ಲಾ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.
ಚುಣಾವಣಾ ಶಿರಸ್ತೇದಾರ್ ರಾಜೇಶ್ ನಾಯ್ಕ್ ಅವರು ಈ ಕೈಗೊಂಡ ಎಲ್ಲ ವ್ಯವಸ್ಥೆಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಈ ಸಂದರ್ಭ ಚುನಾವಣೆ ಪ್ರಥಮ ದರ್ಜೆ ಸಹಾಯಕರಾದ ರಾಜ್ ಕುಮಾರ್, ಕಾರ್ತಿಕ್, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಸಿಬ್ಬಂದಿ ಸದಾಶಿವ ಕೈಕಂಬ, ಶೀತಲ್ ಉಪಸ್ಥಿತರಿದ್ದರು.
0 comments:
Post a Comment