ಜನವರಿ 15 ರಿಂದ ರಾಜ್ಯದಲ್ಲಿ ಎಲ್ಲಾ ಕಾಲೇಜು ತರಗತಿಗಳೂ ಆರಂಭ : ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಡಿಸಿಎಂ ಘೋಷಣೆ - Karavali Times ಜನವರಿ 15 ರಿಂದ ರಾಜ್ಯದಲ್ಲಿ ಎಲ್ಲಾ ಕಾಲೇಜು ತರಗತಿಗಳೂ ಆರಂಭ : ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಡಿಸಿಎಂ ಘೋಷಣೆ - Karavali Times

728x90

11 January 2021

ಜನವರಿ 15 ರಿಂದ ರಾಜ್ಯದಲ್ಲಿ ಎಲ್ಲಾ ಕಾಲೇಜು ತರಗತಿಗಳೂ ಆರಂಭ : ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಡಿಸಿಎಂ ಘೋಷಣೆ

ಬೆಂಗಳೂರು, ಜ. 11, 2021 (ಕರಾವಳಿ ಟೈಮ್ಸ್) : ರಾಜ್ಯದ ಪದವಿಪೂರ್ವ, ಸ್ನಾತಕೋತ್ತರ, ಎಂಜಿನಿಯರಿಂಗ್ ಮತ್ತು ಡಿಪೆÇ್ಲಮಾ ಕೋರ್ಸ್‍ಗಳ ಎಲ್ಲಾ ವಿದ್ಯಾರ್ಥಿಗಳಿಗೆ ಜನವರಿ 15 ರಿಂದ ಪೂರ್ಣವಾಗಿ ಆಫ್‍ಲೈನ್ ತರಗತಿಗಳು ಆರಂಭವಾಗಲಿವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ. ಸೋಮವಾರ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾತನಾಡಿದ ಅವರು, ಅಂತಿಮ ವರ್ಷದ ಆಫ್‍ಲೈನ್ ತರಗತಿಗಳು ಈಗಾಗಲೇ ಯಶಸ್ವಿಯಾಗಿ ನಡೆಯುತ್ತಿವೆ ಮತ್ತು ಇತರ ತರಗತಿಗಳು ಕೂಡಾ ಜನವರಿ 15 ರಿಂದ ಆರಂಭವಾಗಲಿವೆ ಎಂದರು. ಅಲ್ಲದೆ, ಎಲ್ಲಾ ಹಾಸ್ಟೆಲ್‍ಗಳು ಸಹ ತೆರೆಯಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯಗಳನ್ನು ಪುನರಾರಂಭಿಸಲಾಗುವುದು ಎಂದ ಅವರು, ಕೋವಿಡ್-19 ಮಾರ್ಗಸೂಚಿ ಪ್ರಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಾರ್ಗಸೂಚಿಗಳನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಗೆ ವಹಿಸಿಕೊಡಲಾಗಿದೆ. ಕಾಲೇಜು ಗ್ರಂಥಾಲಯಗಳು, ಕ್ಯಾಂಟೀನ್‍ಗಳು, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕ್ರೀಡೆಗಳಿಗೂ ಸಹ ಮಾರ್ಗಸೂಚಿಗಳನ್ನು ರೂಪಾಸಿಲಾಗಿದೆ. ಎನ್‍ಸಿಸಿ ಮತ್ತು ಎನ್‍ಎಸ್‍ಎಸ್ ತರಗತಿಗಳನ್ನು ಸಹ ತೆರೆಯಲಾಗುವುದು. ಎನ್‍ಸಿಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶಿಬಿರಗಳನ್ನು ಸ್ಥಾಪಿಸಲಾಗುವುದು ಎಂದು ಡಿಸಿಎಂ ತಿಳಿಸಿದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಪಾಸ್‍ಗಳನ್ನು ಶೀಘ್ರವಾಗಿ ವಿತರಿಸಲು ಸಾರಿಗೆ ಇಲಾಖೆಗೆ ಸೂಚಿಸಲಾಗಿದ್ದು, ಸ್ಪಂದಿಸುವುದಾಗಿ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. ಸಂಬಂಧಪಟ್ಟ ಕಾಲೇಜು ಮುಖ್ಯಸ್ಥರು ತಮ್ಮ ವ್ಯಾಪ್ತಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಜೊತೆ ಸಂಪರ್ಕ ಸಾಧಿಸಿಕೊಂಡು ಶೀಘ್ರ ವಿದ್ಯಾರ್ಥಿಗಳಿಗೆ ಪಾಸ್ ದೊರಕಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂದ ಡಿಸಿಎಂ ಆಫ್‍ಲೈನ್ ಪರೀಕ್ಷೆಗಳನ್ನು ನಡೆಸಲು ಶೀಘ್ರದಲ್ಲೇ ವೇಳಾಪಟ್ಟಿ ಬಿಡುಗಡೆಗೊಳಿಸುವಂತೆ ವಿವಿ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದರು. ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ ಪ್ರದೀಪ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರವಿಕುಮಾರ್ ಸುರಪುರ, ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತ ವಸಂತ ಕುಮಾರ್ ಸಹಿತ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಜನವರಿ 15 ರಿಂದ ರಾಜ್ಯದಲ್ಲಿ ಎಲ್ಲಾ ಕಾಲೇಜು ತರಗತಿಗಳೂ ಆರಂಭ : ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಡಿಸಿಎಂ ಘೋಷಣೆ Rating: 5 Reviewed By: karavali Times
Scroll to Top