ಅಂಕೋಲ, ಜ. 11, 2021 (ಕರಾವಳಿ ಟೈಮ್ಸ್) : ಕೇಂದ್ರ ಸರಕಾರದ ಆಯುಷ್ ಸಚಿವ ಶ್ರೀಪಾದ ನಾಯಕ್ ಅವರ ಕಾರು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊಸಕಂಬಿ ಎಂಬಲ್ಲಿ ಸೋಮವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಸಚಿವರ ಪತ್ನಿ ವಿಜಯಾ ಶ್ರೀಪಾದ್ ನಾಯಕ್ ಹಾಗೂ ಸಚಿವರ ಪಿ.ಎ. ದೀಪಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಚಿವರ ಸಹಿತ ಇತರ ಮೂರು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಸಚಿವರು ಕುಟುಂಬ ಸಹಿತ ವಿವಿಧ ದೇವಸ್ಥಾನಗಳಿಗೆ ತೆರಳುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ
ಅಂಕೋಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
11 January 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment