ಬಂಟ್ವಾಳ, ಜ. 31, 2021 (ಕರಾವಳಿ ಟೈಮ್ಸ್) : ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಬಂಟ್ವಾಳ ತಾಲೂಕಿನಲ್ಲಿ ಭಾನುವಾರ ನಡೆದ ರಾಪ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶಾಸಕ ಯು ರಾಜೇಶ್ ನಾೈಕ್ ಅವರು ಮಕ್ಕಳಿಗೆ ಪೋಲಿಯೋ ಹನಿ ನೀಡುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ ದೀಪಾ ಪ್ರಭು, ಬಂಟ್ವಾಳ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ ಪುಷ್ಪಲತಾ ಮೊದಲಾದವರು ಭಾಗವಹಿಸಿದ್ದರು. ಇದೇ ವೇಳೆ ಮಾತನಾಡಿದ ಡಾ ದೀಪಾ ಪ್ರಭು ಅವರು ಬಂಟ್ವಾಳ ತಾಲೂಕಿನಲ್ಲಿ 5 ವರ್ಷದೊಳಗಿನ 30,352 ಮಕ್ಕಳಿಗೆ ಪೋಲಿಯೋ ಹನಿ ನೀಡಬೇಕಾಗಿದ್ದು ತಾಲೂಕಿನಾದ್ಯಂತ 190 ಬೂತ್‍ಗಳನ್ನು ತೆರೆಯಲಾಗಿದೆ. ಇದರಲ್ಲಿ 784 ಕಾರ್ಯಕರ್ತೆಯರು ಲಸಿಕಾದಾರರಾಗಿ ಭಾಗವಹಿಸಲಿದ್ದಾರೆ. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಪೋಲಿಯೋ ಬೂತ್‍ಗಳನ್ನು ತೆರೆಯಲಾಗಿದೆ ಎಂದರು.
30 January 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment