ಬಂಟ್ವಾಳ, ಜ 05, 2021 (ಕರಾವಳಿ ಟೈಮ್ಸ್) : ಬಂಟ್ವಾಳ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಸಂಘಟಿಸಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ನಾಲ್ಕು ಕಡೆಗಳಲ್ಲಿ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಈ ಮೊದಲ ಮೊದಲ ಮೈಸೂರು ಪ್ರಾಂತೀಯ ಸಂಕಲ್ಪ ಸಮಾವೇಶ ಬುಧವಾರ (ಜ 6) ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು-ನೆಹರುನಗರ ಸಾಗರ್ ಅಡಿಟೋರಿಯಂ ಸಭಾಂಗಣದಲ್ಲಿ ನಡೆಯಲಿದೆ.
ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿದಂತೆ ಪಕ್ಷದ ಉನ್ನತ ಮಟ್ಟದ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳುವ ಸಮಾವೇಶದಲ್ಲಿ 11 ಗಂಟೆಯ ಬಳಿಕ ಆಹ್ವಾನಿತ ಸುಮಾರು 670 ಮಂದಿ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ರಾಜ್ಯ ನಾಯಕರ ಜೊತೆಗೆ ಮಾಜಿ ಸಚಿವರು, ಶಾಸಕರು ಸೇರಿದಂತೆ ಸ್ಥಳೀಯವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಈ ಸಮಾವೇಶದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ರಾಜ್ಯದ ವಿವಿಧ ವಿಷಯಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಲಿದೆ ಎನ್ನಲಾಗಿದೆ.
ಸಮಾವೇಶದ ಸಂಪೂರ್ಣ ನೇತೃತ್ವವನ್ನು ಮಾಜಿ ಸಚಿವ ಬಿ ರಮಾನಾಥ ರೈ ವಹಿಸಿಕೊಂಡಿದ್ದು, ಪಕ್ಷದ ವಿವಿಧ ನಾಯಕರ ಹಾಗೂ ಕಾರ್ಯಕರ್ತರ ನೇತೃತ್ವದಲ್ಲಿ ಕಾರ್ಯಕ್ರಮದ ಅಚ್ಚುಕಟ್ಟಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಉನ್ನತ ಮಟ್ಟದ ನಾಯಕರು ಆಗಮಿಸುವ ಹಿನ್ನಲೆಯಲ್ಲಿ ಒಂದು ಕಡೆಯಿಂದ ಬಿ ಸಿ ರೋಡು-ಕೈಕಂಬದಿಂದ ಹಾಗೂ ಇನ್ನೊಂದು ಕಡೆಯಿಂದ ಮೆಲ್ಕಾರ್-ಪಾಣೆಮಂಗಳೂರಿನಿಂದ ಪಕ್ಷದ ಬಾವುಟ, ಫ್ಲೆಕ್ಸ್, ಬಂಟಿಂಗ್ಸ್‍ಗಳಿಂದ ಹೆದ್ದಾರಿಯನ್ನು ಅಲಂಕರಿಸಲಾಗಿದೆ.
0 comments:
Post a Comment