ಬಂಟ್ವಾಳ, ಜ. 14, 2021 (ಕರಾವಳಿ ಟೈಮ್ಸ್) : ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಬಳಿ ಕಾರ್ಯಾಚರಿಸುತ್ತಿರುವ ಸುರಭಿ ಬಾರ್ ಆಂಡ್ ರೆಸ್ಟೋರೆಂಟಿಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ನಗದು ಕಳವುಗೈದಿರುವುದು ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಬಾರಿನ ಮುಂಭಾಗದ ಶಟರಿನ ಬೀಗ ಒಡೆದು ಒಳನುಗ್ಗಿದ ಕಳ್ಳರು ಕ್ಯಾಶ್ ಡ್ರಾವರ್‍ನಲ್ಲಿದ್ದ ಮೂರು ಲಕ್ಷ ರೂಪಾಯಿ ನಗದನ್ನು ಎಗರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರನ್ನೂ ಕರೆಸಲಾಗಿದೆ. ಬಂಟ್ವಾಳ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
14 January 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment