ಬೆಂಜನಪದವಿನಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಪತ್ತೆ ಹಚ್ಚಿದ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ - Karavali Times ಬೆಂಜನಪದವಿನಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಪತ್ತೆ ಹಚ್ಚಿದ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ - Karavali Times

728x90

5 January 2021

ಬೆಂಜನಪದವಿನಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಪತ್ತೆ ಹಚ್ಚಿದ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ





ಬಂಟ್ವಾಳ, ಜ 05, 2021 (ಕರಾವಳಿ ಟೈಮ್ಸ್) : ತಾಲೂಕಿನ ಬೆಂಜನಪದವಿನಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಬಂಟ್ವಾಳ ತಹಶೀಲ್ದಾರ್ ಅನಿತಾಲಕ್ಷ್ಮೀ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. 

ಬೆಂಜನಪದವಿನ ವಿಶಾಲವಾದ ಪ್ರದೇಶದಲ್ಲಿ ಸಮತಟ್ಟು ಮಾಡಿರುವುದು, ಕೆಂಪು ಕಲ್ಲುಗಳನ್ನು ತೆಗೆಯಲು ಯಂತ್ರಗಳನ್ನು ಜೋಡಣೆ ಮಾಡಲು ಸ್ಥಳ ಇಟ್ಟಿರುವುದು. ಅಲ್ಲಲ್ಲಿ ಕಲ್ಲು ತೆಗೆಯುವ ಕೋರೆಗಳು ನಿರ್ಮಾಣವಾಗಿರುವುದು ಕಂಡು ಬಂದಿದ್ದು, ಪ್ರದೇಶದಲ್ಲಿ ಅನಧಿಕೃತವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆದಿರುತ್ತದೆ ಎಂಬುದನ್ನು ಅಧಿಕಾರಿಗಳು ಮನಗಂಡಿದ್ದಾರೆ. ಪರಿಸರದ ಮತ್ತೊಂದು ಬದಿಯಲ್ಲಿ ಕೋರೆಯಿಂದ ಕಲ್ಲುಗಳನ್ನು ತೆಗೆದು ರಾಶಿ ಹಾಕಿರುವುದು ಕಂಡು ಬಂದಿದೆ. ಕಲ್ಲು ತೆಗೆಯುವುದರಿಂದ ಕೆಂಪು ಕಲ್ಲಿನ ಹುಡಿಗಳು ಅಲ್ಲಲ್ಲಿ ರಾಶಿ ಬಿದ್ದಿದ್ದವು. ದೂರ ಪ್ರದೇಶದಿಂದ ಕೋರೆ ನಡೆಯುವ ಸ್ಥಳಕ್ಕೆ ನೀರು ಪೂರೈಕೆ ಮಾಡುತ್ತಿರುವುದನ್ನೂ ಅಧಿಕಾರಿಗಳ ತಂಡ ಪತ್ತೆ ಹಚ್ಚಿದೆ. 

ಅಮ್ಮುಂಜೆ ಗ್ರಾಮದಲ್ಲಿ ಒಟ್ಟು 5 ಕಡೆಗಳಲ್ಲಿ ಈ ರೀತಿಯ ಅನಧಿಕೃತ ಗಣಿಗಾರಿಕೆ ನಡೆದಿರುವುದು ಕಂಡು ಬಂದಿದೆ. ಯಾವುದೇ ಯಂತ್ರೋಪಕರಣಗಳು ಕಂಡು ಬಂದಿಲ್ಲ. ಅಕ್ರಮವಾಗಿ ಗಣಿಗಾರಿಕೆ ನಡೆದಿರುವುದರಿಂದ ಗಣಿಗಾರಿಕೆ ನಡೆಸಿದ ಜಾಗದ ಮಾಲಕರಿಗೆ ದಂಡ ವಿಧಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ತಹಶೀಲ್ದಾರ್ ತಂಡದಲ್ಲಿ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಗ್ರಾಮ ಲೆಕ್ಕಾಧಿಕಾರಿ ಪ್ರಶಾಂತ್ ಇದ್ದರು. 








  • Blogger Comments
  • Facebook Comments

0 comments:

Post a Comment

Item Reviewed: ಬೆಂಜನಪದವಿನಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಪತ್ತೆ ಹಚ್ಚಿದ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ Rating: 5 Reviewed By: karavali Times
Scroll to Top