ಸಂಕ್ರಾಂತಿ ಬಳಿಕ ರಾಜ್ಯದ ಎಲ್ಲಾ ಕಾಲೇಜು ತರಗತಿಗಳು ಆರಂಭ : ಸಚಿವ ಅಶ್ವತ್ಥ ನಾರಾಯಣ - Karavali Times ಸಂಕ್ರಾಂತಿ ಬಳಿಕ ರಾಜ್ಯದ ಎಲ್ಲಾ ಕಾಲೇಜು ತರಗತಿಗಳು ಆರಂಭ : ಸಚಿವ ಅಶ್ವತ್ಥ ನಾರಾಯಣ - Karavali Times

728x90

9 January 2021

ಸಂಕ್ರಾಂತಿ ಬಳಿಕ ರಾಜ್ಯದ ಎಲ್ಲಾ ಕಾಲೇಜು ತರಗತಿಗಳು ಆರಂಭ : ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು, ಜ. 09, 2021 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪೆÇ್ಲಮಾ ಹಾಗೂ ಎಂಜಿನಿಯರಿಂಗ್ ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಸಿಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಸರಕಾರಿ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ತಮ್ಮ ಇಲಾಖಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಮಾತನಾಡಿದ ಅವರು ಈಗಾಗಲೇ ಜನವರಿ 1 ರಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪೆÇ್ಲಮಾ ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ನಡೆಯುತ್ತಿದೆ. ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸಲಾಗುವುದು. ಈ ಮೂಲಕ ಕೋವಿಡ್ ಪೂರ್ವ ಸ್ಥಿತಿಗೆ ಶೈಕ್ಷಣಿಕ ಸಂಸ್ಥೆಗಳನ್ನು ಮರಳಿಸುವ ಪ್ರಯತ್ನ ಮಾಡಲಾಗುತ್ತದೆ ಎಂದರು. ಸಂವಾದ ವೇಳೆ ಭೌತಿಕ ತರಗತಿ ಆರಂಭಿಸುವ ಬಗ್ಗೆ ವರದಿ ನೀಡುವಂತೆ ಕುಲಪತಿಗಳಿಗೆ ಸೂಚನೆ ನೀಡಲಾಗಿದೆ. ಅವರಿಂದ ವರದಿ ಬಂದ ಕೂಡಲೇ ಕಾಲೇಜು ಆರಂಭದ ದಿನಾಂಕ ನಿಗದಿಪಡಿಸಲಾಗುವುದು ಎಂದು ಸಚಿವರು ತಿಳಿಸಿದರು. ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ತಡವಾಗುತ್ತಿರುವ ಹಿನ್ನೆಲೆಯಲ್ಲಿ ಪದವಿ, ಸ್ವಾತಕೋತ್ತರ ಪದವಿ ಹಾಗೂ ಉನ್ನತ ಶಿಕ್ಷಣ ಹಾಗೂ ಇತರೆ ಪರೀಕ್ಷೆಗಳೂ ತಡವಾಗುವ ಮುನ್ಸೂಚನೆ ನೀಡಿದ ಸಚಿವರು, ಆನ್‍ಲೈನ್ ಪರೀಕ್ಷೆಗಳಿಗಿಂತ ಆಫ್ ಲೈನ್ ಪರೀಕ್ಷೆಯೇ ಉತ್ತಮ ಎಂದು ಎಲ್ಲಾ ವಿವಿಗಳ ಕುಲಪತಿ, ಕುಲ ಸಚಿವರು ಸಲಹೆ ನೀಡಿದ್ದಾರೆ. ಇವರ ಸಲಹೆಗಳನ್ನು ಸರಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದರು. ಸಭೆಯಲ್ಲಿ ಪ್ರಮುಖವಾಗಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂದ ಬಗ್ಗೆ ಮಹತ್ವದ ಚರ್ಚೆ ನಡೆಯಿತು. ಮೇ 2ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಘೋಷಿಸಲಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿ ರೂಪಿಸಲಾಗುವುದು ಎಂದು ಸಚಿವ ಅಶ್ವತ್ಥನಾರಾಯಣ ಹೇಳಿದರು. ಉನ್ನತ ಶಿಕ್ಷಣದ ವಿದ್ಯಾರ್ಥಿಗಳ ಬಸ್ ಪಾಸ್ ಗೊಂದಲ ಕುರಿತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಇದೇ ವೇಳೆ ಸಚಿವರು ತಿಳಿಸಿದರು.
  • Blogger Comments
  • Facebook Comments

0 comments:

Post a Comment

Item Reviewed: ಸಂಕ್ರಾಂತಿ ಬಳಿಕ ರಾಜ್ಯದ ಎಲ್ಲಾ ಕಾಲೇಜು ತರಗತಿಗಳು ಆರಂಭ : ಸಚಿವ ಅಶ್ವತ್ಥ ನಾರಾಯಣ Rating: 5 Reviewed By: karavali Times
Scroll to Top