ನವದೆಹಲಿ, ಜ. 03, 2021 (ಕರಾವಳಿ ಟೈಮ್ಸ್) : ದೇಶದ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರದಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಾವಾಮಾನ ವೈಪರೀತ್ಯದಿಂದ ನಗರದಲ್ಲಿ ವಿಮಾನಗಳ ಹಾರಾಟ ವ್ಯತ್ಯಯವಾಗುವ ಸಾಧ್ಯತೆಯಿದೆ. ಪ್ರಯಾಣಿಕರು ತಮ್ಮ ವಿಮಾನ ಹಾರಾಟದ ಸ್ಥಿತಿಗತಿಯನ್ನು ತಪಾಸಣೆ ಮಾಡಿಕೊಳ್ಳುವಂತೆ ಸ್ಪೈಸ್ ಜೆಟ್ ಪ್ರಕಟಣೆ ಹೊರಡಿಸಿದೆ.
ದೆಹಲಿ ಹಾಗೂ ಹರ್ಯಾಣ ಭಾಗಗಳಲ್ಲಿ ಶನಿವಾರದಿಂದ ಗುಡುಗು ಮಿಂಚಿನಿಂದ ಕೂಡಿದ ಭಾರೀ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಶನಿವಾರ ದೆಹಲಿಯಲ್ಲಿ ತಾಪಮಾನ ಏಳು ಡಿಗ್ರಿ ಸೆಲ್ಸಿಯಸ್ ಇದ್ದು, ಮುಂದಿನ 2-3 ದಿನಗಳಲ್ಲಿ ದೆಹಲಿಯಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಲಿದೆ.
0 comments:
Post a Comment