ನಾಳೆ (ಜನವರಿ 30) ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಕಂಬಳ - Karavali Times ನಾಳೆ (ಜನವರಿ 30) ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಕಂಬಳ - Karavali Times

728x90

29 January 2021

ನಾಳೆ (ಜನವರಿ 30) ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಕಂಬಳ

ಬಂಟ್ವಾಳ, ಜ. 29, 2021 (ಕರಾವಳಿ ಟೈಮ್ಸ್) : ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ ಜನವರಿ 30 ರಂದು ಶನಿವಾರ ನಡೆಯಲಿದ್ದು, ಆ ಮೂಲಕ ಜಿಲ್ಲೆಯಲ್ಲಿ ಈ ವರ್ಷದ ಪ್ರಥಮ ಕಂಬಳಕ್ಕೆ ಚಾಲನೆ ದೊರೆಯಲಿದೆ. ಇಲ್ಲಿನ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಈ ಕಂಬಳ ಕೂಟಕ್ಕೆ ಸ್ಥಳೀಯ ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಚಾಲನೆ ನೀಡಲಿದ್ದಾರೆ. ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ, ಮೂಡುಬಿದ್ರೆ ಚೌಟರ ಅರಮನೆ ಕುಲದೀಪ್ ಎಂ. ಮೊದಲಾದವರು ಭಾಗವಹಿಸುವರು. ಬಂಟ್ವಾಳ ಶಾಸಕ ಯು ರಾಜೇಶ ನಾಯ್ಕ್ ಅಧ್ಯಕ್ಷತೆ ವಹಿಸುವರು. ರಾಜ್ಯ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್. ಅಂಗಾರ, ಭಟ್ಕಳ ಶಾಸಕ ಸುನಿಲ್ ನಾಯಕ್, ಸೊರಬ ಶಾಸಕ ಕುಮಾರ್ ಬಂಗಾರಪ್ಪ, ಶಾಸಕರಾದ ಹರೀಶ ಪೂಂಜ, ಉಮಾನಾಥ ಕೋಟ್ಯಾನ್, ಪ್ರತಾಪಸಿಂಹ ನಾಯಕ್, ಕೆ. ಹರೀಶ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಬಿ. ನಾಗರಾಜ ಶೆಟ್ಟಿ, ಕಿಯೋನಿಕ್ಸ್ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಹೈಕೋರ್ಟ್ ಎಡಿಷನಲ್ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್, ರಾಷ್ಟ್ರೀಯ ಕಬಡ್ಡಿ ಆಟಗಾರರಾದ ಸುಕೇಶ್ ಹೆಗ್ಡೆ, ಪ್ರಶಾಂತ್ ರೈ ಮೊದಲಾದ ಗಣ್ಯರು ಭಾಗವಹಿಸುವರು. ಈ ಬಾರಿ ಜಿಲ್ಲಾ ಕಂಬಳ ಸಮಿತಿ ನಿರ್ಧಾರದಂತೆ ಕೋವಿಡ್ ನಿಯಮಾವಳಿ ಪಾಲನೆ ಜೊತೆಗೆ ಕೂಟ ನಡೆಯಲಿದೆ. ಕೂಟದಲ್ಲಿ ಒಟ್ಟು 150ಕ್ಕೂ ಮಿಕ್ಕಿ ಜೋಡಿ ಕೋಣಗಳು ಬಾಗವಹಿಸುವ ನಿರೀಕ್ಷೆ ಇದೆ ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ತಿಳಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ನಾಳೆ (ಜನವರಿ 30) ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಕಂಬಳ Rating: 5 Reviewed By: karavali Times
Scroll to Top