ಬೆಂಗಳೂರು, ಜ. 09, 2021 (ಕರಾವಳಿ ಟೈಮ್ಸ್) : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಹಠಾತ್ ಬುಲಾವ್ ನೀಡಿದ್ದು, ನಾಯಕರ ಅಣತಿ ಮೇರೆಗೆ ಸಿಎಂ ಭಾನುವಾರ ಬೆಳಿಗ್ಗೆ 8.20 ಕ್ಕೆ ಬೆಂಗಳೂರಿನಿಂದ ನಿರ್ಗಮಿಸಿ 11 ಗಂಟೆಗೆ ದೆಹಲಿ ತಲುಪಲಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆ ಕುರಿತಂತೆ ದಿನದಿನಕ್ಕೆ ಕುತೂಹಲ ಹೆಚ್ಚುತ್ತಿದ್ದು ಸಂಪುಟ ವಿಸ್ತರಣೆ ಯಾವಾಗೆಂದು ಸಚಿವಾಕಾಂಕ್ಷಿಗಳು ಕಾಯುತ್ತಿದ್ದಾರೆ.
ಈ ನಡುವೆ ಬಿಜೆಪಿ ಹೈಕಮಾಂಡ್ ನಿಂದ ಸಿಎಂ ಯಡಿಯೂರಪ್ಪ ಅವರಿಗೆ ಬುಲಾವ್ ಬಂದಿದೆ. ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸಲು ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದ್ದರೂ ಈ ಮಧ್ಯೆ ಇದೇ ತಿಂಗಳ 16 ರಂದು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ರಾಜ್ಯಕ್ಕೆ ಆಗಮಿಸಲಿದ್ದು ಈ ಹಿನ್ನಲೆಯಲ್ಲಿಯೂ ಬುಲಾವ್ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಒಟ್ಟಿನಲ್ಲಿ ಸಿಎಂಗೆ ಹೈಕಮಾಂಡ್ ಹಠಾತ್ ಆಗಿ ನೀಡಿರುವ ಬುಲಾವ್ ಇದೀಗ ರಾಜ್ಯ ಬಿಜೆಪಿ ಪಡಸಾಲೆಯಲ್ಲಿ ತೀವ್ರ ಕುತೂಹಲ ಹುಟ್ಟು ಹಾಕಿದೆ. ಭೇಟಿ ವೇಳೆ ಸಿಎಂ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
9 January 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment