ಬಂಟ್ವಾಳ, ಜ. 15, 2021 (ಕರಾವಳಿ ಟೈಮ್ಸ್) : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ವಿಟ್ಲ ಹಾಗೂ ಸಿಂಧೂರ ಜ್ಞಾನವಿಕಾಸ ಕೇಂದ್ರ, ಭಾರತ ಸರಕಾರ ದತ್ತೋಪಂತ್ ಠೇಂಗಡಿ, ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ಧಿ ಮಂಡಳಿ, ಉದ್ಯೋಗ ಸಚಿವಾಲಯ, ಉಪ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವ ಉದ್ಯೋಗ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಇರಾ ಕಂಚಿನಡ್ಕಪದವು ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಇರಾ ಪ್ರಗತಿಬಂಧು ಸ್ವಸಾಯ ಸಂಘ ಒಕ್ಕೂಟದ ಮುಡಿಪು ವಲಯಾಧ್ಯಕ್ಷ ಜಯಪ್ರಕಾಶ್ ಕಾಜವ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಮಮತಾ ಹರೀಶ್ ರಾವ್ ಉದ್ಘಾಟಿಸಿದರು. ಬಂಟ್ವಾಳ ತಾ ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅತಿಥಿಯಾಗಿದ್ದರು. ಮಂಗಳೂರು ಯುವವಾಹಿನಿ ಮಹಿಳಾ ಘಟಕದ ಅಧ್ಯಕ್ಷೆ ರೇಖಲತಾ, ಜಿಲ್ಲಾ ಸಣ್ಣ ಕೈಗಾರಿಕಾ ಮಹಿಳಾ ಸಂಘದ ಅಧ್ಯಕ್ಷೆ ಹರಿಣ ಜಿ ರಾವ್, ಸದಸ್ಯೆ ಶಾಂತಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಯೋಜನೆಯ ವಲಯಾಧ್ಯಕ್ಷ ನವೀನ್ ಪಾದಲ್ಪಾಡಿ, ಇರಾ ಒಕ್ಕೂಟದ ಅಧ್ಯಕ್ಷ ಭಾಸ್ಕರ್, ಸೇವಾ ಪ್ರತಿನಿಧಿ ಕವಿತಾ ಮೊದಲಾದವರು ಭಾಗವಹಿಸಿದ್ದರು. ತಾಲೂಕು ಯೋಜನಾಧಿಕಾರಿ ಪಿ ಚೆನ್ನಪ್ಪ ಗೌಡ ಸ್ವಾಗತಿಸಿ, ಮೇಲ್ವಿಚಾರಕಿ ಮೋಹಿನಿ ವಂದಿಸಿದರು. ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಳಿನಾಕ್ಷಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
15 January 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment