ಬಂಟ್ವಾಳ, ಜ 21, 2021 (ಕರಾವಳಿ ಟೈಮ್ಸ್) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಶಿವಪಾರ್ವತಿ ಜ್ಞಾನವಿಕಾಸ ಕೇಂದ್ರ ಗೋಳ್ತಮಜಲು ಬಿ ಇದರ ಸಹಯೋಗದಲ್ಲಿ ನೆಟ್ಲ ನಿಟಿಲೇಶ್ವರ ದೇವಸ್ಥಾನದ ವಠಾರದಲ್ಲಿ ಸರಕಾರಿ ಸೌಲಭ್ಯಗಳ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಆಯುಷ್ಮನ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಒಕ್ಕೂಟದ ಅಧ್ಯಕ್ಷ ಶಿವಪ್ಪಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆಯ ನಿಕಟಪೂರ್ವಾಧ್ಯಕ್ಷ ಬಟ್ಯಪ್ಪ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ ಇದರ ಯೋಜನಾಧಿಕಾರಿ ಪಿ. ಚೆನ್ನಪ್ಪ ಗೌಡ ಅವರು ಆಯುಷ್ಮನ್ ಕಾರ್ಡ್ ಉಪಯೋಗದ ಬಗ್ಗೆ ಹಾಗೂ ನೆಟ್ ವರ್ಕ್ ಆಸ್ಪತ್ರೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಂಗೀತ ಶರ್ಮ, ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಳಿನಾಕ್ಷಿ ಶೆಟ್ಟಿ, ಮೇಲ್ವಿಚಾರಕಿ ಸವಿತಾ ಕುಮಾರಿ, ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು. ಭವ್ಯ ಸ್ವಾಗತಿಸಿ, ಹೇಮಲತಾ ವಂದಿಸಿದರು. ಸೇವಾ ಪ್ರತಿನಿಧಿ ಮಾಲತಿ ಕಾರ್ಯಕ್ರಮ ನಿರೂಪಿಸಿದರು.
20 January 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment