ಪುತ್ತೂರು, ಜ. 18, 2021 (ಕರಾವಳಿ ಟೈಮ್ಸ್) : ತಾಲೂಕಿನ ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ತಿರುವಿನಲ್ಲಿ ಬೈಕ್ ಮೂಲಕ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಕಡಬ-ಸವಣೂರು ನಿವಾಸಿ ನವಾಜ್ (30) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಕೆಎ 21 ಇ 8850 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪುತ್ತೂರು ನಗರ ಠಾಣಾ ಎಸ್ಸೈ ಜಂಬೂರಾಜ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ದಾಳಿ ವೇಳೆ ಪೊಲೀಸರು ಆರೋಪಿಯ ವಶದಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ 2 ಕೆಜಿ ಗಾಂಜಾ, ಸುಮಾರು 12 ಸಾವಿರ ರೂಪಾಯಿ ಮೌಲ್ಯದ ಬೈಕ್ ಹಾಗೂ ಮೊಬೈಲ್ ಫೆÇೀನ್ ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ದ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಕಲಂ: 8ಬಿ, 20 (ಬಿ) (11)(ಬಿ) ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
17 January 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment