ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗೆ ಸಂಭಾವ್ಯ ವೇಳಾಪಟ್ಟಿ ಘೋಷಿಸಿದ ಶಿಕ್ಷಣ ಸಚಿವರು - Karavali Times ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗೆ ಸಂಭಾವ್ಯ ವೇಳಾಪಟ್ಟಿ ಘೋಷಿಸಿದ ಶಿಕ್ಷಣ ಸಚಿವರು - Karavali Times

728x90

6 January 2021

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗೆ ಸಂಭಾವ್ಯ ವೇಳಾಪಟ್ಟಿ ಘೋಷಿಸಿದ ಶಿಕ್ಷಣ ಸಚಿವರು



ಬೆಂಗಳೂರು, ಜ 06, 2021 (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಸಂಭಾವ್ಯ ತಾತ್ಕಾಲಿಕ ವೇಳಾಪಟ್ಟಿಯನ್ನು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದು, ಮೇ ದ್ವಿತೀಯ ವಾರದಲ್ಲಿ ಸೆಕೆಂಡ್ ಪಿಯುಸಿ ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದೆ ಎಂದಿದ್ದಾರೆ. 

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಠ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದವರು ತಿಳಿಸಿದ್ದಾರೆ. 

ಈ ಬಗ್ಗೆ ಈಗಾಗಲೇ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿ ಅಂತಿಮಗೊಳಿಸಲಾಗಿದ್ದು, ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯಮಾಪನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯ ಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.








  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗೆ ಸಂಭಾವ್ಯ ವೇಳಾಪಟ್ಟಿ ಘೋಷಿಸಿದ ಶಿಕ್ಷಣ ಸಚಿವರು Rating: 5 Reviewed By: karavali Times
Scroll to Top