ಬಂಟ್ವಾಳ, ಜ. 06, 2020 (ಕರಾವಳಿ ಟೈಮ್ಸ್) : ಕಾರ್ಯಕರ್ತರ ಧ್ವನಿಯೇ ಪಕ್ಷದ ಅಧ್ಯಕ್ಷರ ಧ್ವನಿಯಾಗಬೇಕೇ ಹೊರತು ಅಧ್ಯಕ್ಷನ ಇಚ್ಚೆಯನ್ನು ಕಾರ್ಯಕರ್ತರು ಒಪ್ಪಿಕೊಳ್ಳುವ ಸನ್ನಿವೇಶ ನಿರ್ಮಾಣವಾಗಬಾರದು. ಈ ನಿಟ್ಟಿನಲ್ಲಿ ಗ್ರಾಮಾಂತರ ಮಟ್ಟದದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಪಕ್ಷ ಸಂಘಟಿಸುವ ಮೂಲಕ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಕೆಪಿಸಿಸಿ ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಸಾಗರ್ ಆಡಿಟೋರಿಯಂನಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಪ್ರಥಮ ಮೈಸೂರು ಪ್ರಾಂತೀಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ. ಅದನ್ನು ಜನರಿಗೆ ತಲುಪಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಸಂಘಟಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಪಣತೊಟ್ಟಿದ್ದೇವೆ ಎಂದರು.
ರಾಜ್ಯದಲ್ಲಿ ಈಗಾಗಲೆ ಗೋಹತ್ಯಾ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಮತ್ತೆ ಅದಕ್ಕೆ ಸುಗ್ರೀವಟಜ್ಞೆ ತರುವ ಮೂಲಕ ರಾಜಕೀಯ ಮಾಡಲಾಗುತ್ತಿದೆ ಎಂದ ಡಿಕೆಶಿ ಇದೊಂದು ರಾಜಕೀಯ ಮಾಡುವ ತಂತ್ರವಷ್ಟೆ ಎಂದು ಟೀಕಿಸಿದರು. ಗೋವುಗೆ ರಾಜ್ಯದ ಎಲ್ಲಾ ಜಾತಿ, ಧರ್ಮದ ವರ್ಗದ ಜನ ಅವರದ್ದೇ ಆದ ರೀತಿಯಲ್ಲಿ ಗೌರವ ನೀಡುತ್ತಲೇ ಬಂದಿದ್ದಾರೆ. ಅದಕ್ಕೆ ಯಾವುದೇ ರೀತಿಯ ಸಂಶಯದ ಲೇಪ ಹಚ್ಚುವಂತಿಲ್ಲ ಎಂದರು.
0 comments:
Post a Comment