ಐದು ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ : ಮೇ 2ಕ್ಕೆ ಫಲಿತಾಂಶ - Karavali Times ಐದು ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ : ಮೇ 2ಕ್ಕೆ ಫಲಿತಾಂಶ - Karavali Times

728x90

26 February 2021

ಐದು ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ : ಮೇ 2ಕ್ಕೆ ಫಲಿತಾಂಶ

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಚುನಾವಣೆ : ಮೇ 2 ರಂದು ಫಲಿತಾಂಶ ನವದೆಹಲಿ, ಫೆ. 26, 2021 (ಕರಾವಳಿ ಟೈಮ್ಸ್) : ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ದಿನಾಂಕ ಘೋಷಿಸಿದೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಆಯುಕ್ತ ಸುನಿಲ್ ಅರೋರಾ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ್ದಾರೆ. ಅಸ್ಸಾಂ ರಾಜ್ಯದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಅಂದರೆ ಎಪ್ರಿಲ್ 6 ರಂದು ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಮಾರ್ಚ್ 27, 2ನೇ ಹಂತ ಎಪ್ರಿಲ್ 1, 3ನೇ ಹಂತ ಎ 6 ರಂದು, ಎ 10 ರಂದು 4ನೇ ಹಂತ, 17 ರಂದು 5ನೇ ಹಂತ, 22 ರಂದು 6ನೇ ಹಂತ, 26 ರಂದು 7ನೇ ಹಂತ ಹಾಗೂ ಎ 29 ರಂದು 8ನೇ ಹಂತ ಚುನಾವಣೆಗಳು ನಡೆಯಲಿದೆ. ಎಲ್ಲ ರಾಜ್ಯಗಳ ಚುನಾವಣೆಗಳ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದೆ ಎಂದರು. ಕೇರಳದ 140, ತಮಿಳುನಾಡು 234, ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಕ್ಷೇತ್ರಗಳಿವೆ. ಇತ್ತೀಚೆಗಷ್ಟೇ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರಕಾರ ಪತನಗೊಂಡಿದ್ದರಿಂದ ಪುದುಚೇರಿ ಕೇಂದ್ರಾಡಳಿತ ಪ್ರದೇಶದ 30 ಕ್ಷೇತ್ರಗಳಿಗೂ ಇದೇ ವೇಳೆ ಚುನಾವಣೆ ನಡೆಯಲಿದೆ. ಮತಗಟ್ಟೆಗಳಲ್ಲಿನ ಸಿದ್ಧತೆ, ಭದ್ರತೆ ಸೇರಿದಂತೆ ಕೊರೊನಾ ನಿಯಮಗಳ ಪಾಲನೆ ಕುರಿತು ಚುನಾವಣೆ ಆಯೋಗದ ಅಧಿಕಾರಿಗಳು ಸಭೆ ನಡೆಸಿ ಚರ್ಚಿಸಿದ್ದು, ಭಾರೀ ಬಂದೋಬಸ್ತ್‍ನೊಂದಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದವರು ತಿಳಿಸಿದರು. ಒಟ್ಟು 824 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 18.6 ಕೋಟಿ ಮತದಾರರಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಮನೆ ಮನೆ ಭೇಟಿಗೆ ಐದು ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ನಾಮಪತ್ರ ಸಲ್ಲಿಕೆ ಹಾಗೂ ಡೆಪಾಸಿಟ್ ಪಾವತಿ ಆನ್ ಲೈನ್ ಮೂಲಕ ನಡೆಯಲಿದ್ದು, ನಾಮಪತ್ರ ಸಲ್ಲಿಸಲು 2 ವಾಹನಗಳಲ್ಲಿ ಮಾತ್ರ ಬರುವಂತೆ ನಿಯಮ ರೂಪಿಸಲಾಗಿದೆ. 80 ವರ್ಷಕ್ಕಿಂತ ಮೇಲ್ಪಟ್ಟ ಮತದಾರರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು, ಮತದಾನ ಅವಧಿಯನ್ನು 1 ಗಂಟೆ ವಿಸ್ತರಿಸಲಾಗಿದೆ ಎಂದು ಅರೋರಾ ತಿಳಿಸಿದರು.
  • Blogger Comments
  • Facebook Comments

0 comments:

Post a Comment

Item Reviewed: ಐದು ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ : ಮೇ 2ಕ್ಕೆ ಫಲಿತಾಂಶ Rating: 5 Reviewed By: karavali Times
Scroll to Top