ನಾಳೆ (ಫೆ. 12) ಆಲಂಪುರಿ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಲೋಕಾರ್ಪಣೆ - Karavali Times ನಾಳೆ (ಫೆ. 12) ಆಲಂಪುರಿ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಲೋಕಾರ್ಪಣೆ - Karavali Times

728x90

10 February 2021

ನಾಳೆ (ಫೆ. 12) ಆಲಂಪುರಿ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಲೋಕಾರ್ಪಣೆ

ಬಂಟ್ವಾಳ ಫೆ. 11, 2021 (ಕರಾವಳಿ ಟೈಮ್ಸ್) : ಅರಣ್ಯ ಇಲಾಖೆ ವತಿಯಿಂದ ಕಾವಳಪಡೂರು ಗ್ರಾಮದ ಆಲಂಪುರಿಯಲ್ಲಿ ಸಜ್ಜುಗೊಂಡ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಫೆ. 12 ರಂದು (ನಾಳೆ) ಬೆಳಿಗ್ಗೆ 10.30ಕ್ಕೆ ಲೋಕಾರ್ಪಣೆಗೊಳ್ಳಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್ ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಜಿ ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ಪದ್ಮಶೇಖರ ಜೈನ್, ತಾ ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ವiಲ್ಲಿಕಾ ವಿ ಶೆಟ್ಟಿ, ಸದಸ್ಯೆ ಧನಲಕ್ಷ್ಮಿ ಬಂಗೇರಾ ಭಾಗವಹಿಸಲಿದ್ದಾರೆ. ಬೆಂಗಳೂರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ ಮೋಹನ್, ಬೆಂಗಳೂರು ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಅರಕಲ್, ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಾಲ್ಕರ್, ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ ಕರಿಕಾಲನ್ ಗೌರವ ಉಪಸ್ಥಿತರಿರುವರು ಎಂದು ಮಂಗಳೂರು ಸಹಾಯಕ ಅರಣ್ಯ ಸಂರಕ್ಷಾಧಿಕಾರಿ ಎನ್ ಸುಬ್ರಹ್ಮಣ್ಯ ರಾವ್ ಹಾಗೂ ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ನಾಳೆ (ಫೆ. 12) ಆಲಂಪುರಿ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಲೋಕಾರ್ಪಣೆ Rating: 5 Reviewed By: karavali Times
Scroll to Top