ಬಂಟ್ವಾಳ, ಫೆ. 27, 2021 (ಕರಾವಳಿ ಟೈಮ್ಸ್) : ಇಲ್ಲಿನ ಕಂದಾಯ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಆಹಾರ ಶಾಖೆಯ ಶಿರಸ್ತೇದಾರ್ ಶ್ರೀನಿವಾಸ್ ಹಾಗೂ ಬೆರಳಚ್ಚುಗಾರ ವೃತ್ತಿಯ ಶ್ರೀಮತಿ ಸತ್ಯಶಂಕರಿ ಅವರನ್ನು ಶುಕ್ರವಾರ ಬಂಟ್ವಾಳ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಬೀಳ್ಕೊಡಲಾಯಿತು.
ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ ನಿವೃತ್ತರ ಬಗ್ಗೆ ಮಾತನಾಡಿದರು.
ಈ ಸಂದರ್ಭ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ಅಣ್ಣು ನಾಯ್ಕ್, ಶ್ರೀನಿವಾಸ್ ಅವರ ಪತ್ನಿ ವಿಜಯಲಕ್ಷ್ಮೀ, ಸತ್ಯ ಶಂಕರಿ ಅವರ ಪತಿ ಮೋನಪ್ಪ ಗೌಡ, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
ಕು. ನವ್ಯ ಎಸ್.ಎನ್. ರಾವ್ ಪ್ರಾರ್ಥನೆ ನಡೆಸಿದರು. ಗ್ರಾಮ ಲೆಕ್ಕಾಧಿಕಾರಿ ಜನಾರ್ದನ ಜೆ. ಸ್ವಾಗತಿಸಿ, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ವಂದಿಸಿದರು.
26 February 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment