ಬಂಟ್ವಾಳ, ಫೆ. 28, 2021 (ಕರಾವಳಿ ಟೈಮ್ಸ್) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು ಇವುಗಳ ಆಶ್ರಯದಲ್ಲಿ ವಾಮದಪದವು ಹಾಗೂ ಚೆನ್ನೈತ್ತೋಡಿಯಲ್ಲಿ ನಿರ್ಮಾಣಗೊಂಡ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಉದ್ಘಾಟನೆ ಮಾರ್ಚ್ 1 ರಂದು ಸೋಮವಾರ (ನಾಳೆ) ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅಧ್ಯಕ್ಷತೆ ವಹಿಸುವರು. ಸಚಿವ ಎಸ್ ಅಂಗಾರ ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
28 February 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment