ಬಂಟ್ವಾಳ, ಫೆ. 27, 2021 (ಕರಾವಳಿ ಟೈಮ್ಸ್) : ತಾಲೂಕಿನ ಕರೋಪಾಡಿ ಗ್ರಾಮದ ಪೆರ್ನೆಮುಗೇರು ನಿವಾಸಿ ಅಬ್ದುಲ್ ರಝಾಕ್ ಎಂಬವರ ಮನೆಗೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳವುಗೈದಿದ್ದಾರೆ.
ಮನೆಯ ಎದುರು ಅಡಿಕೆ ಹಾಗೂ ತೆಂಗಿನಕಾಯಿ ಶೇಖರಣೆ ಮಾಡುವ ಕೊಣೆಯ ಬೀಗವನ್ನು ಮುರಿದು ಒಳ ನುಗ್ಗಿದ ಕಳ್ಳರು 15 ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಸುಮಾರು 1 ಲಕ್ಷ ರೂಪಾಯಿ ಮೌಲ್ಯದ, 300 ಕೆಜಿ ಇಡಿ ಅಡಿಕೆಯನ್ನು ಕಳವುಗೈದು ಪರಾರಿಯಾಗಿದ್ದಾರೆ.
ಈ ಬಗ್ಗೆ ಅಬ್ದುಲ್ ರಝಾಕ್ ನೀಡಿದ ದೂರಿನಂತೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಬಾರತೀಯ ದಂಡ ಸಂಹಿತೆ ಕಲಂ 457, 380 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
26 February 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment