ಬಂಟ್ವಾಳ, ಫೆ. 01, 2021 (ಕರಾವಳಿ ಟೈಮ್ಸ್) : ಸಾಮಾಜಿಕ ಅಸಮಾನತೆಗಳಿಂದ ತುಳಿತಕ್ಕೆ ಒಳಗಾದ ಜನರ ಪರವಾಗಿ ಸಾಮಾಜಿಕ ಕ್ರಾಂತಿಯನ್ನು ಕೈಗೊಂಡ ಶರಣರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯರಾಗಿದ್ದಾರೆ ಎಂದು ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಹೇಳಿದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಿ ಸಿ ರೋಡು ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಸೋಮವಾರ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಉಪಸ್ಥಿತರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ ವಂದಿಸಿದರು.
1 February 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment