ಬಂಟ್ವಾಳ, ಫೆ. 12, 2021 (ಕರಾವಳಿ ಟೈಮ್ಸ್) : ತಾಲೂಕಿ ವೀರಕಂಭ-ಮಜಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ನೀಡುವ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.
ಕಲ್ಲಡ್ಕ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೆಟಿಲ್ಡಾ ಕಾರ್ಯಕ್ರಮ ಉದ್ಘಾಟಿಸಿದರು. ಕೆಲಿಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಿಮ್ಮಪ್ಪ ನಾಯ್ಕ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತೆ ಶ್ರೀಮತಿ ಸಂಗೀತ ಶರ್ಮ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ, ಉಪಾಧ್ಯಕ್ಷ ವಿಜಯ ಶೇಖರ್ ಬಿ,. ವೀರಕಂಬ ಗ್ರಾ ಪಂ ಸದಸ್ಯರಾದ ಮೀನಾಕ್ಷಿ ಸುನಿಲ್, ಶಾಲಾಭಿವೃದ್ದಿ ಸದಸ್ಯರು ಭಾಗವಹಿಸಿದ್ದರು. ಶಿಕ್ಷಕಿ ಶಕುಂತಲ ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿದರು, ಶಿಕ್ಷಕರಾದ ಅನುಷಾ ವಂದಿಸಿ, ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.
12 February 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment