ಅಸ್ಸಾಂ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನ ಗೆದ್ದ ರಮ್ಯಶ್ರೀಗೆ ಹುಟ್ಟೂರ ಸ್ವಾಗತ - Karavali Times ಅಸ್ಸಾಂ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನ ಗೆದ್ದ ರಮ್ಯಶ್ರೀಗೆ ಹುಟ್ಟೂರ ಸ್ವಾಗತ - Karavali Times

728x90

12 February 2021

ಅಸ್ಸಾಂ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನ ಗೆದ್ದ ರಮ್ಯಶ್ರೀಗೆ ಹುಟ್ಟೂರ ಸ್ವಾಗತ

ಬಂಟ್ವಾಳ, ಫೆ. 12, 2021 (ಕರಾವಳಿ ಟೈಮ್ಸ್) : ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ಫೆ 9 ರಂದು ಮಂಗಳವಾರ ನಡೆದ 36ನೇ ರಾಷ್ಟ್ರೀಯ ಮಟ್ಟದ ಜ್ಯೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2021ನೇ ಪಂದ್ಯದ ಜಾವಲಿನ್ (ಈಟಿ) ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದುಕೊಂಡಿದ್ದ ಸಿದ್ದಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಅವರನ್ನು ಶುಕ್ರವಾರ ಗುಣಶ್ರೀ ವಿದ್ಯಾಲಯ ಮತ್ತು ನಾಗರಿಕರ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿ, ಅಭಿನಂದಿಸಲಾಯಿತು. ಸಂಗಬೆಟ್ಟು ಶ್ರೀ ವೀರಭದ್ರ ಸ್ವಾಮಿ ಮಹಮ್ಮಾಯಿ ದೇವಳದಿಂದ ಗುಣಶ್ರೀ ವಿದ್ಯಾಲಯ ತನಕ ತೆರೆದ ವಾಹನದಲ್ಲಿ ರಮ್ಯಶ್ರೀ ಜೈನ್ ಅವರನ್ನು ಕರೆತರುವ ಮೂಲಕ ಗೌರವಿಸಲಾಯಿತು. ಮನ್ ದೇವ್ ಎಜುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಮಾಜಿ ಸಚಿವ ಬಿ ನಾಗರಾಜ ಶೆಟ್ಟಿ, ಜೈನ್ ಮಿಲನ್ ವಲಯ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ಬಂಟ್ವಾಳ ತಾ ಪಂ ಸದಸ್ಯ ಪ್ರಭಾಕರ ಪ್ರಭು, ನಿವೃತ್ತ ಮುಖ್ಯ ಶಿಕ್ಷಕ ದಾಮೋದರ ರಾವ್, ಹಿರಿಯ ವೈದ್ಯ ಡಾ ಪ್ರಭಾಚಂದ್ರ ಜೈನ್, ರೋಟರಿ ಕ್ಲಬ್ ಅಧ್ಯಕ್ಷ ಡಾ ಸುದೀಪ್ ಕುಮಾರ್ ಜೈನ್, ಡಾ ಕೃಷ್ಣಮೂರ್ತಿ, ಸಂಗಬೆಟ್ಟು ಕ್ಷೇತ್ರದ ಪ್ರಧಾನ ಅರ್ಚಕ ಪ್ರಭಾಕರ ಐಗಳ್, ಚಂದ್ರಹಾಸ ಗುರಿಕಾರ, ನಿವೃತ್ತ ಅರಣ್ಯಾಧಿಕಾರಿ ದಾಮೋದರ ಶೆಟ್ಟಿಗಾರ್, ಶಾಲಾ ಸಂಚಾಲಕ ವಿಜಯ ಕುಮಾರ್ ಚೌಟ, ಗ್ರಾ ಪಂ ಅಧ್ಯಕ್ಷ ಸತೀಶ ಪೂಜಾರಿ ಹಲೆಕ್ಕಿ, ಸದಸ್ಯರಾದ ಸಂದೇಶ ಶೆಟ್ಟಿ ಪೆÇಡುಂಬ, ಉದಯ ಕುಮಾರ್, ಸುರೇಶ್, ಉದ್ಯಮಿ ಹೇಮಚಂದ್ರ ಶೆಟ್ಟಿಗಾರ್, ಪ್ರಗತಿಪರ ಕೃಷಿಕ ರವೀಂದ್ರ ಜೈನ್ ಮಾಲ್ದಾಡು, ಪದ್ಮಶ್ರೀ ಆರ್ ಜೈನ್, ಶಾಲಾ ಮುಖ್ಯ ಶಿಕ್ಷಕಿ ಸಬಿತಾ ಲವಿನಾ ಪಿಂಟೋ, ಪ್ರಾಂಶುಪಾಲೆ ಲಾವಣ್ಯ ಮೊದಲಾದವರು ಈ ಸಂದರ್ಭ ಭಾಗವಹಿಸಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಅಸ್ಸಾಂ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನ ಗೆದ್ದ ರಮ್ಯಶ್ರೀಗೆ ಹುಟ್ಟೂರ ಸ್ವಾಗತ Rating: 5 Reviewed By: karavali Times
Scroll to Top