ಬಂಟ್ವಾಳ, ಫೆ. 20, 2021 (ಕರಾವಳಿ ಟೈಮ್ಸ್) : ಸರ್ವಜ್ಞ ತನ್ನ ಹಿತನುಡಿಗಳಿಂದ ಸಮಾಜವನ್ನು ಒಳ್ಳೆಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ಇವರ ತ್ರಿಪದಿಗಳಲ್ಲಿರುವ ಸಂದೇಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು ಕಛೇರಿ ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ಹೇಳಿದರು.
ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಲ್ಲಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶನಿವಾರ ನಡೆದ ಕವಿ ಸರ್ವಜ್ಞ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ವೇಳೆ ಮಾತನಾಡಿದ ರಾಜ್ಯ ಕುಲಾಲ ಕುಂಬಾರರ ಮಹಿಳಾ ಸಂಘದ ಅಧ್ಯಕ್ಷೆ ಭಾರತಿ ಸೇಸಪ್ಪ ಅವರು ಆಡು ಮಾತಿನಿಂದ ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದವರು ಸರ್ವಜ್ಞ. ಅವಿದ್ಯಾವಂತರಾದರೂ ಎಲ್ಲ ಜನರನ್ನೂ ಒಂದೇ ದೃಷ್ಟಿಯಿಂದ ನೋಡಿ ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿದವರು ಎಂದರು.
ಈ ಸಂದರ್ಭ ಪುರಸಭಾ ಸದಸ್ಯರಾದ ಹರಿಪ್ರಸಾದ್, ಶೋಭಾ ಹರಿಶ್ಚಂದ್ರ, ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುಂದರ್ ಬಿ., ಸಮಾಜ ಸೇವಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಪದ್ಮನಾಭ ವಿಟ್ಲ, ಪ್ರಮುಖರಾದ ಸುಕುಮಾರ್ ಬಂಟ್ವಾಳ, ಪುನೀತ್ ಎಸ್ ಮೈರಾನ್‍ಪಾದೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿಷಯ ನಿರ್ವಾಹಕ ವಿಶು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು. ಜನಾರ್ದನ ಬಂಟ್ವಾಳ್ ಸ್ವಾಗತಿಸಿ, ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ವಂದಿಸಿದರು.
20 February 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment