ಬಂಟ್ವಾಳ, ಫೆ. 02, 2021 (ಕರಾವಳಿ ಟೈಮ್ಸ್) : ತಾಲೂಕಿನ ಸೂರಿಕುಮೇರು ಜಂಕ್ಷನ್ನಿನ ಮಸೀದಿ ಬಳಕ ಗ್ಯಾಸ್ ಟ್ಯಾಂಕರ್ ಹೆದ್ದಾರಿ ಮಧ್ಯಭಾಗದಲ್ಲೇ ಅಡ್ಡವಾಗಿ ಮಗುಚಿ ಬಿದ್ದ ಘಟನೆ ಮಂಗಳವಾರ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ನಡೆದಿದೆ.
ಅನಿಲ ಸಾಗಾಟದ ಬೃಹತ್ ಟ್ಯಾಂಕರ್ ಹೆದ್ದಾರಿಗೆ ಅಡ್ಡವಾಗಿ ಪಲ್ಟಿಯಾಗಿದ್ದು ಸ್ಥಳದಲ್ಲಿ ಕೆಲ ಹೊತ್ತು ಆತಂಕಕ್ಕೆ ಕಾರಣವಾಗಿತ್ತು, ಅನಿಲ ಸೋರಿಕೆ ಅಗದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಇದರಿಂದ ಪರಿಸರವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ.
ಮುಂಜಾಗ್ರತಾ ಕ್ರಮವಾಗಿ ಮಂಗಳೂರು-ಬೆಂಗಳೂರು ಹೆದ್ದಾರಿಯ ಸೂರಿಕುಮೇರು ಮಾರ್ಗವಾಗಿ ಸಂಚರಿಸುವ ಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ವಿಟ್ಲ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದು, ವಾಹನ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಿದ್ದಾರೆ. ಟ್ಯಾಂಕರ್ ಪಲ್ಟಿಯಾದ ಪರಿಸರದಲ್ಲಿ ಬೆಂಕಿ ಬಳಕೆ ಮಾಡದಂತೆ ಅಧಿಕಾರಿಗಳು ಪರಿಸರವಾಸಿಗಳಿಗೆ ಸೂಚಿಸಿದ್ದಾರೆ.
1 February 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment