ರಾಜ್ಯದಲ್ಲೂ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬಾರದ ಹಿನ್ನಲೆ : ಕ್ಯಾಟರಿಂಗ್ ನಿರ್ವಾಹಕರಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ - Karavali Times ರಾಜ್ಯದಲ್ಲೂ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬಾರದ ಹಿನ್ನಲೆ : ಕ್ಯಾಟರಿಂಗ್ ನಿರ್ವಾಹಕರಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ - Karavali Times

728x90

20 February 2021

ರಾಜ್ಯದಲ್ಲೂ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬಾರದ ಹಿನ್ನಲೆ : ಕ್ಯಾಟರಿಂಗ್ ನಿರ್ವಾಹಕರಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ಬೆಂಗಳೂರು, ಫೆ. 20, 2021 (ಕರಾವಳಿ ಟೈಮ್ಸ್) : ರಾಜ್ಯದಲ್ಲೂ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಕ್ಯಾಟರಿಂಗ್ ಹಾಗೂ ಊಟ ಬಡಿಸುವವರಿಗಾಗಿ ಆರೋಗ್ಯ ಇಲಾಖೆ ವಿಶೇಷ ಮಾರ್ಗಸೂಚಿ ಹೊರಡಿಸಿದೆ. ಕ್ಯಾಟರಿಂಗ್ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗಳು ಕಡ್ಡಾಯವಾಗಿ 15 ದಿನಕ್ಕೊಮ್ಮೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕ್ಯಾಟರಿಂಗ್, ಅಡುಗೆ ಸ್ಥಳದಲ್ಲಿ ಮಾಸ್ಕ್, ಗ್ಲೌಸ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅಡುಗೆ ತಯಾರಿಕಾ ಸ್ಥಳದಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ., ಕ್ಯಾಟರಿಂಗ್‍ನಲ್ಲಿ ಕೆಲಸ ಮಾಡುವ ಎಲ್ಲರೂ ಆರ್‍ಟಿಪಿಸಿಆರ್ ಟೆಸ್ಟ್ ಕಡ್ಡಾಯ ಮಾಡಿಸಿಕೊಳ್ಳಬೇಕು., ಹೈ ರಿಸ್ಕ್ ಇರುವ ವ್ಯಕ್ತಿಗಳು, ವಿವಿಧ ರೋಗಗಳಿಂದ ಬಳಲುತ್ತಿರುವವರು, ಗರ್ಭಿಣಿಯರು ಇದ್ದೆಡೆ ವಿಶೇಷ ನಿಗಾ ಇಡಬೇಕು., ಪ್ರವೇಶದ್ವಾರ, ನಿರ್ಗಮನ ದ್ವಾರದಲ್ಲಿ ಸ್ಯಾನಿಟೈಸ್ ವ್ಯವಸ್ಥೆ ಮಾಡಬೇಕು., ಪಾರ್ಕಿಂಗ್ ಸ್ಥಳ, ಹಾಲ್‍ಗಳಲ್ಲಿ ಸಾಮಾಜಿಕ ಅಂತರ ಕಾಪಾಡುವಂತೆ ನಿಗಾ ವಹಿಸಬೇಕು, ಸಾಮಾಜಿಕ ಅಂತರ ಕಾಪಾಡಲು ಸರ್ಕಲ್ ರಚನೆ ಮಾಡಬೇಕು ಎಂದು ವಿಶೇಷ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದಲ್ಲೂ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬಾರದ ಹಿನ್ನಲೆ : ಕ್ಯಾಟರಿಂಗ್ ನಿರ್ವಾಹಕರಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ Rating: 5 Reviewed By: karavali Times
Scroll to Top